ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ಸೋಂಕು ಧೃಡವಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4 ಕ್ಕೇರಿದೆ.
ಇತ್ತೀಚೆಗೆ ಚಿಕ್ಕಬಳ್ಳಾಪುರದಲ್ಲಿ ಮೂಳೆ ತಜ್ಞರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿತ್ತು, ಈ ಬೆನ್ನಲ್ಲೇ ಮತ್ತೆ ಮೂವರಿಗೆ ಸೋಂಕು ತಗುಲಿದೆ. ಸೋಂಕಿತರನ್ನು ಐಸೋಲೇಷನ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದು, ಆರೋಗ್ಯ ಇಲಾಖೆ ಕೆಲವು ನಿರ್ಬಂಧಗಳನ್ನು ವಿಧಿಸಿದೆ.