alex Certify ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನೇಮಕ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ನೇಮಕ ಸಾಧ್ಯತೆ

ಬೆಂಗಳೂರು: ಸಿಬಿಐ ನಿರ್ದೇಶಕರಾಗಿ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರು ನೇಮಕವಾಗುವ ಸಾಧ್ಯತೆ ಇದೆ.

ಸಿಬಿಐ ಹಾಲಿ ನಿರ್ದೇಶಕರಾಗಿರುವ ಸುಭೋದ್ ಕುಮಾರ್ ಅವರ ಅಧಿಕಾರಾವಧಿ ಇದೇ ತಿಂಗಳಾಂತ್ಯಕ್ಕೆ ಮುಕ್ತಾಯವಾಗಲಿದ್ದು, ಮುಂದಿನ ನಿರ್ದೇಶಕರ ಆಯ್ಕೆಗೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್, ಪ್ರಧಾನಿ ನರೇಂದ್ರ ಮೋದಿ, ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದ ಉನ್ನತ ಮಟ್ಟದ ಸಮಿತಿ ಸಭೆ ನಡೆಸಿದೆ.

ಸಭೆಯಲ್ಲಿ ಡಿಜಿಪಿ ಪ್ರವೀಣ್ ಸೂದ್ ಅವರನ್ನು ಸಿಬಿಐ ಮುಂದಿನ ನಿರ್ದೇಶಕರ ಸ್ಥಾನಕ್ಕೆ ನೇಮಕ ಮಾಡುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಬಹುತೇಕ ಪ್ರವೀಣ್ ಸೂದ್ ಅವರ ಹೆಸರನ್ನೇ ಅಂತಿಮಗೊಳಿಸುವ ಸಾಧ್ಯತೆ ಇದೆ. 1986ರ ಕರ್ನಾಟಕ ಕೇಡರ್ ಐಪಿಎಸ್ ಅಧಿಕಾರಿಯಾಗಿರುವ ಪ್ರವೀಣ್ ಸೂದ್ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದು, ಅವರ ಸೇವಾ ಅವಧಿ ಇನ್ನೂ ಒಂದು ವರ್ಷ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...