ಬೆಂಗಳೂರು: ರಾಜ್ಯದ ಎಲ್ಲಾ ಶಾಲೆಗಳಲ್ಲಿ 2022-23ನೇ ಸಾಲಿನಿಂದ 5 ಹಾಗೂ 8ನೇ ತರಗತಿಗಳಿಗೂ ವಾರ್ಷಿಕ ಪರೀಕ್ಷೆ ನಡೆಸುವಂತೆ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಮಕ್ಕಳ ಕಲಿಕಾ ಕೊರತೆ ನೀಗಿಸಲು ಹಾಗೂ ಕಲಿಕಾ ಚೇತರಿಕೆ ನಿಟ್ಟಿನಲ್ಲಿ 5 ಹಾಗೂ 8ನೇ ತರಗತಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸುವಂತೆ ಸೂಚಿಸಿದೆ. ಶಾಲೆ ಹಾಗೂ ಮೌಲ್ಯ ನಿರ್ಣಯ ಮಂಡಳಿ ಹಂತದಲ್ಲಿ ಪ್ರಶ್ನೆ ಪತ್ರಿಗಳನ್ನು ರೂಪಿಸಿ ಪರೀಕ್ಷೆ ನಡೆಸಿ ಮೌಲ್ಯಮಾಪನ ಮಾಡಬೇಕು. ಫಲಿತಾಂಶಗಳನ್ನು ಶಾಲಾವಾರು, ಕ್ಲಸ್ಟರ್ ವಾರು, ತಾಲೂಕುವಾರು ವಿಶ್ಲೇಷಣೆ ಮಾಡಬೇಕು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.
ಇದರಿಂದ ವಿದ್ಯಾರ್ಥಿಗಳ ಕಲಿಕಾ ಮಟ್ಟ, ಕೊರತೆ, ವಿಷಯದಲ್ಲಿನ ಸಮಸ್ಯೆ ತಿಳಿಯುತ್ತದೆ. ವಿದ್ಯಾರ್ಥಿಗಳ ಕಲಿಕಾ ಪ್ರಗತಿ ಹಾಗೂ ಸಾಮರ್ಥ್ಯಗಳನ್ನಾಧರಿಸಿದ ಏಕರೂಪದ ಸಾಧನಾ ಮತ್ತು ತಂತ್ರ ಬಳಸಿ ಮೌಲ್ಯಮಾಪನ ಮಾಡಿ ವಿಶ್ಲೇಷಣೆ ಮಾಡಬಹುದಾಗಿದೆ ಎಂದು ತಿಳಿಸಿದೆ.