ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ರೇಸ್ ನಿಂದ ಡಿ.ಕೆ. ಶಿವಕುಮಾರ್ ಹೊರಗುಳಿದಿದ್ದು, ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.
ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಎಂದು ಕಾಂಗ್ರೆಸ್ ಹೈಕಮಾಂಡ್ ಘೋಷಣೆ ಮಾಡಲಿದೆ ಎಂದು ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ನಡುವೆ ಮುಖ್ಯಮಂತ್ರಿ ಹುದ್ದೆಗೆ ತೀವ್ರ ಪೈಪೋಟಿ ಇತ್ತು.
ನಿನ್ನೆ ನಡೆದ ಶಾಸಕಾಂಗ ಸಭೆಯಲ್ಲಿ ಸಿಎಂ ಆಯ್ಕೆ ನಿರ್ಧಾರವನ್ನು ಹೈಕಮಾಂಡ್ ಗೆ ವಹಿಸಲಾಗಿತ್ತು. ಹೈಕಮಾಂಡ್ ಸೂಚನೆ ಮೇರೆಗೆ ಇಂದು ಸಿದ್ದರಾಮಯ್ಯ ದೆಹಲಿಗೆ ತೆರಳಿ ಸಮಾಲೋಚನೆ ನಡೆಸಿದ್ದಾರೆ. ಅನಾರೋಗ್ಯದ ಕಾರಣ ಡಿ.ಕೆ. ಶಿವಕುಮಾರ್ ದೆಹಲಿ ಭೇಟಿಯನ್ನು ಕೊನೆಗಳಿಗೆಯಲ್ಲಿ ರದ್ದುಪಡಿಸಿದ್ದಾರೆ.
ಅವರು ಸಿಎಂ ಹುದ್ದೆ ಸಿಗದ ಬೇಸರದಿಂದ ಅವರು ದೆಹಲಿ ಭೇಟಿ ರದ್ದು ಮಾಡಿದ್ದಾರೆ ಎಂದು ಹೇಳಲಾಗಿದೆ. ಕಾಂಗ್ರೆಸ್ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಗೆ ಪರಿಗಣಿಸಿದ್ದು, ಸಿದ್ದರಾಮಯ್ಯ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗಿದೆ.