alex Certify ರಾಹುಲ್ ಗಾಂಧಿ ಭಾರತ್ ಜೋಡೋ ಮಾಡಿದ್ದ ಕ್ಷೇತ್ರಗಳಲ್ಲಿ ‘ಕೈ’ ಕಮಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಹುಲ್ ಗಾಂಧಿ ಭಾರತ್ ಜೋಡೋ ಮಾಡಿದ್ದ ಕ್ಷೇತ್ರಗಳಲ್ಲಿ ‘ಕೈ’ ಕಮಾಲ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ದಿಗ್ವಿಜಯದತ್ತ ದಾಪುಗಾಲಿಟ್ಟಿದ್ದು ಸ್ಪಷ್ಟ ಬಹುಮತ ಪಡೆದಿದೆ. ಸಿದ್ದರಾಮಯ್ಯನವರ ನೇಮ್ ಮತ್ತು ಫೇಮ್ ಜೊತೆಗೆ ಡಿ.ಕೆ. ಶಿವಕುಮಾರ್ ಅವರ ಸಂಘಟನಾ ಚತುರತೆ ವರ್ಕೌಟ್ ಆಗಿದೆ. ಇದರೊಂದಿಗೆ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸಿದ ಭಾರತ್ ಜೋಡೋ ಯಾತ್ರೆ ಕೂಡ ಗೆಲುವಿಗೆ ಕೊಡುಗೆ ನೀಡಿದೆ. ಅದು ಹೇಗೆಂದರೆ ಪಕ್ಷದ ನಾಯಕ ರಾಹುಲ್ ಗಾಂಧಿ ರಾಜ್ಯದಲ್ಲಿ ನಡೆಸಿದ್ದ ಭಾರತ್ ಜೋಡೋ ಯಾತ್ರೆ ಸಾಗಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ಕನಿಷ್ಠ 36 ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದಿದೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ಸುಮಾರು 4,000 ಕಿ.ಮೀ ಕ್ರಮಿಸಿದ 145 ದಿನಗಳ ಯಾತ್ರೆಯು ಸೆಪ್ಟೆಂಬರ್ 30, 2022 ರಂದು ಚುನಾವಣೆ ಎದುರಿಸುತ್ತಿದ್ದ ಕರ್ನಾಟಕವನ್ನು ಪ್ರವೇಶಿಸಿತ್ತು. ಅಕ್ಟೋಬರ್ 23 ರವರೆಗೆ ರಾಹುಲ್ ಗಾಂಧಿ ಮತ್ತು ಇತರ ಪಕ್ಷದ ನಾಯಕರು ಯಾತ್ರೆಯಲ್ಲಿ ಏಳು ಜಿಲ್ಲೆಗಳಲ್ಲಿ ಹೆಜ್ಜೆ ಹಾಕಿದ್ದರು. ರಾಜ್ಯದ ಚಾಮರಾಜನಗರ, ಮೈಸೂರು, ಮಂಡ್ಯ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ರಾಯಚೂರು ಜಿಲ್ಲೆ ಮೂಲಕ ಯಾತ್ರೆ ಸಾಗಿತ್ತು.

ಈ ಏಳು ಜಿಲ್ಲೆಗಳು ಕರ್ನಾಟಕ ವಿಧಾನಸಭೆಯ 224 ಕ್ಷೇತ್ರಗಳಲ್ಲಿ 51 ಕ್ಷೇತ್ರಗಳನ್ನು ಹೊಂದಿದ್ದು, ಅದರಲ್ಲಿ ಕಾಂಗ್ರೆಸ್ 36 ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...