
ಉಡುಪಿ ತಲುಪುವ ಮುನ್ನ ಶಿಂಧೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದಾರೆ. ನಂತರ ಧರ್ಮಸ್ಥಳ ದೇವಸ್ಥಾನದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಲಿದ್ದಾರೆ. ಅವರು ಉಡುಪಿಯ ಶ್ರೀಕೃಷ್ಣ ದೇವಸ್ಥಾನಕ್ಕೂ ಭೇಟಿ ನೀಡಲಿದ್ದು, ಸೋಮವಾರವೇ ಮಹಾರಾಷ್ಟ್ರಕ್ಕೆ ಮರಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮೇ 8 ರ ಸೋಮವಾರ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು ಕೊನೆ ದಿನವಾದ ಅಂದು ಶಿಂಧೆ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ.