alex Certify BIG NEWS: ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಕೆ

ಶಿವಮೊಗ್ಗ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಇಂದು ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೂ ಮುನ್ನ ರಂಗನಾಥ ಸ್ವಾಮಿ ದೇವಾಲಯಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು. ದೇವಾಲಯದಿಂದ ತಾಲೂಕು ಕಚೇರಿವರೆಗೆ ನಡೆದ ಮೆರವಣಿಗೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾಗಿದ್ದರು.

ಮೆರವಣಿಗೆಯಲ್ಲಿ ವಿವಿಧ ಕಲಾತಂಡಗಳು ಭಾಗಿಯಾಗಿದ್ದು ವಿಶೇಷ. ತಾಲೂಕು ಕಚೇರಿಗೆ ಆಗಮಿಸಿ ಕುಮಾರ್ ಬಂಗಾರಪ್ಪ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...