
ಬೆಂಗಳೂರು: ಯುಜಿ -ಸಿಐಟಿ ಆಪ್ಷನ್ ಎಂಟ್ರಿಗೆ ಮತ್ತೆ ಕಾಲಾವಕಾಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಪ್ರಸಕ್ತ ಸಾಲಿನ ಯುಜಿ –ಸಿಇಟಿ ರ್ಯಾಂಕಿಂಗ್ ಅಭ್ಯರ್ಥಿಗಳು ಇಂಜಿನಿಯರಿಂಗ್, ಆರ್ಕಿಟೆಕ್ಚರ್, ನ್ಯಾಚುರೋಪತಿ, ಯೋಗ, ಪಶು ವೈದ್ಯಕೀಯ ಮೊದಲಾದ ಕೋರ್ಸ್ ಗಳ ಪ್ರವೇಶಕ್ಕೆ ಆಪ್ಷನ್ ದಾಖಲಿಸಲು ಜುಲೈ 30 ರವರೆಗೆ ಅವಕಾಶ ನೀಡಲಾಗಿತ್ತು. ಸಾರ್ವಜನಿಕರ ಮನವಿಯ ಮೇರೆಗೆ ಮತ್ತಷ್ಟು ದಿನ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಎಚ್ಚರಿಕೆಯಿಂದ ಆಪ್ಷನ್ ದಾಖಲು ಮಾಡಬೇಕು ಎಂದು ಕೆಇಎ ಕಾರ್ಯ ನಿರ್ವಹಣಾ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.
ಯೋಗ ಮತ್ತು ನ್ಯಾಚುರೋಪತಿ ಕೋರ್ಸುಗಳ ಸೀಟ್ ಮ್ಯಾಟ್ರಿಕ್ಸ್ ಬಂದಿದ್ದು, ಅದಕ್ಕೂ ಆಯ್ಕೆಗಳನ್ನು ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಷ್ಟ್ರೀಯ ವೈದ್ಯಕೀಯ ಮಂಡಳಿ, ಕಾಲಕಾಲಕ್ಕೆ ಹೊರಡಿಸಲಾಗುವ ಸೂಚನೆಗಳು, ಅಧಿಸೂಚನೆಗಳ ಅನ್ವಯ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸುಗಳಿಗೆ ಪ್ರವೇಶ ಪ್ರಕ್ರಿಯೆ ನಡೆಸಲಾಗುವುದು ಎಂದು ಹೇಳಲಾಗಿದೆ.