ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸುವ ಸಿಇಟಿ ಪರೀಕ್ಷೆಯ 50,000 ವಿದ್ಯಾರ್ಥಿಗಳು ಇನ್ನೂ ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿಲ್ಲವೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ.
ಒಟ್ಟಾರೆ 3.27 ಲಕ್ಷ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆಗೆ ನೋಂದಣಿ ಮಾಡಿಸಿಕೊಂಡಿದ್ದಾರೆ. ಶುಕ್ರವಾರದವರೆಗೆ 2,76,495 ಅಭ್ಯರ್ಥಿಗಳು ಹಾಲ್ ಟಿಕೆಟ್ ಡೌನ್ಲೋಡ್ ಮಾಡಿಕೊಂಡಿದ್ದು, ಇನ್ನೂ 50,889 ಅಭ್ಯರ್ಥಿಗಳು ಪ್ರವೇಶ ಪತ್ರ ಪಡೆದುಕೊಳ್ಳಬೇಕಿದೆ ಎಂದು ಹೇಳಲಾಗಿದೆ.
ಕೊನೆ ಕ್ಷಣದಲ್ಲಿ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವುದರಿಂದ ಪಾರಾಗಲು ಆದಷ್ಟು ಮೊದಲೇ ಪ್ರವೇಶ ಪತ್ರ ಪಡೆದುಕೊಳ್ಳುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.