ಬೆಳಗಾವಿ: ಮಹಾ ಮಳೆಯಿಂದಾಗಿ ಬೆಳಗಾವಿ ಜಿಲ್ಲೆ ಖಾನಾಪುರದಾದ್ಯಂತ ಹಲವು ಗ್ರಾಮಗಳು ಮುಳುಗಡೆಯಾಗಿದ್ದು, ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಸಿಂಧನೂರು-ಹೆಮ್ಮಗಡಾ ರಾಜ್ಯ ಹೆದ್ದಾರಿ ನದಿಯಂತಾಗಿದ್ದು, ಅಲಾತ್ರ ಹಳ್ಳ ಉಕ್ಕಿ ಹರಿಯುತ್ತಿದೆ.
ಖಾನಾಪುರದಲ್ಲಿ ಭಾರಿ ಮಳೆಯಿಂದಾಗಿ 30ಕ್ಕೂ ಹೆಚ್ಚು ಗ್ರಾಮಾಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ಥವ್ಯಸ್ಥಗೊಂಡಿದೆ. ರಣಮಳೆಯಿಂದಾಗಿ ಅಲಾತ್ರಿ ಹಳ್ಳ ಉಕ್ಕಿ ಹರಿಯುತ್ತಿದ್ದು, ಕರ್ನಾಟದಿಂದ ಗೋವಾ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ಸಿಂಧನೂರು-ಹೆಮ್ಮಡಗಾ ಹೆದ್ದಾರಿ ಜಲಾವೃತಗೊಂಡಿದೆ. ರಸ್ತೆಯ ಮೇಲೆ 4-5 ಅಡಿ ನೀರು ಹರಿಯುತ್ತಿದ್ದು, ಮುಂಜಾಗೃತಾ ಕ್ರಮವಾಗಿ ರಾಜ್ಯ ಹೆದ್ದಾರಿಯನ್ನು ಪೊಲೀಸರು ಬಂದ್ ಮಾಡಿದ್ದಾರೆ.
ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ಗಳನ್ನು ಹಾಕಿ ರಸ್ತೆ ಬಂದ್ ಮಾಡಲಾಗಿದ್ದು, ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ. ಉಭಯ ರಾಜ್ಯಗಳ ನಡುವೆ ಸಂಪರ್ಕ ಕಲ್ಪಿಸುವ ರಸ್ತೆ ಸಂಚಾರ ಸ್ಥಗಿತಗೊಂಡಿದೆ.