ಬೆಂಗಳೂರು: ರಾಜ್ಯ ಸರ್ಕಾರ 8 ತಿಂಗಳ ನಂತರ ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು, ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.
ನಿವೃತ್ತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅವರನ್ನು ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೋಡಿ, ನಿವೃತ್ತ ಐಎಎಸ್ ಅಧಿಕಾರಿ ಶಾಮ ಭಟ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.
ಎಲ್. ನಾರಾಯಣಸ್ವಾಮಿ ಹಿಮಾಚಲ ಪ್ರದೇಶದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ. 8 ತಿಂಗಳ ಬಳಿಕ ಮಾನವ ಹಕ್ಕುಗಳ ಆಯೋಗಕ್ಕೆ ಅಧ್ಯಕ್ಷರು ಸದಸ್ಯರನ್ನು ನೇಮಕ ಮಾಡಲಾಗಿದ್ದು, ಈ ವಿಳಂಬಕ್ಕೆ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು., ಹೈಕೋರ್ಟ್ ನಿಂದ ಸರ್ಕಾರಕ್ಕೆ ನೋಟಿಸ್ ನೀಡಲಾಗಿತ್ತು. ವಿರೋಧ ಪಕ್ಷದ ನಾಯಕರ ಆಯ್ಕೆಯಾಗದ ಕಾರಣ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಸದಸ್ಯರ ಆಯ್ಕೆ ವಿಳಂಬವಾಗಿದೆ ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಹೈಕೋರ್ಟ್ ಗೆ ಉತ್ತರ ನೀಡಿದ್ದರು.