ಬೆಂಗಳೂರು: ಇತ್ತೀಚೆಗೆ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ನೌಕರರ ತುಟ್ಟಿಭತ್ಯೆ ಹೆಚ್ಚಳ ಮಾಡಲು ನಿರ್ಧರಿಸಿದೆ.
ಈ ಕುರಿತು ಸಿಎಂ ಬಸವರಾಜ್ ಬೊಮ್ಮಾಯಿ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ನೌಕರರಿಗೆ ಜನವರಿ 1 ರಿಂದ ಜಾರಿಗೆ ಬರುವಂತೆ ತುಟ್ಟಿ ಭತ್ಯೆಯನ್ನು ಶೇ. 2.75 ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಇದಕ್ಕಾಗಿ ಸರ್ಕಾರ 1447 ಕೋಟಿ ರೂ. ವಾರ್ಷಿಕ ವೆಚ್ಚ ಭರಿಸಲಿದೆ. ಈ ಸಂಬಂಧ ಶೀಘ್ರವೇ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ತಿಳಿಸಿದ್ದಾರೆ.
ಕಾರ್ಪೋರೇಟ್ ದೇಣಿಗೆ ಸಂಗ್ರಹ ಪಟ್ಟಿಯಲ್ಲಿ ಮೊದಲ ಸ್ಥಾನ ಉಳಿಸಿಕೊಂಡ ಬಿಜೆಪಿ
ಪ್ರಸ್ತುತ ರಾಜ್ಯ ಸರ್ಕಾರಿ ನೌಕರರ ಮೂಲ ವೇತನ 17,000-67,550 ರೂಪಾಯಿವರೆಗಿದೆ. ಶೇ.5ರಷ್ಟು ತುಟ್ಟಿಭತ್ಯೆ ಹೆಚ್ಚಿಸುವಂತೆ ಸರ್ಕಾರಿ ನೌಕರರು ಬೇಡಿಕೆ ಇಟ್ಟಿದ್ದರು. ಆದರೆ ರಾಜ್ಯ ಸರ್ಕಾರ ಇದೀಗ ಶೇ.2.75ರಷ್ಟು ತುಟ್ಟಿಭತ್ಯೆ ಹೆಚ್ಚಿಸಲು ಅನುಮತಿ ನೀಡಿದೆ.