
ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯಸರ್ಕಾರ ಈ ಬಗ್ಗೆ ಆದೇಶ ಹೊರಡಿಸಿದೆ.
ಪ್ರಸಕ್ತ ಮುಖ್ಯ ಕಾರ್ಯದರ್ಶಿ ರವಿಕುಮಾರ್ ನಿವೃತ್ತರಾಗಲಿರುವ ಹಿನ್ನಲೆಯಲ್ಲಿ ಮುಖ್ಯ ಕಾರ್ಯದರ್ಶಿ ನೇಮಿಸಲಾಗಿದೆ. ರವಿಕುಮಾರ್ ಅವರ ನಿವೃತ್ತಿಯಿಂದ ತೆರವಾಗಲಿರುವ ಸ್ಥಾನಕ್ಕೆ ಐಎಎಸ್ ಅಧಿಕಾರಿ ವಂದಿತಾ ಶರ್ಮ ಅವರನ್ನು ನೇಮಕ ಮಾಡಲಾಗಿದೆ. 1986ನೇ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಅವರು ಅಭಿವೃದ್ಧಿ ಆಯುಕ್ತರಾಗಿ ಮತ್ತು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.