alex Certify ಮದ್ಯ ಖರೀದಿಗೆ ಕನಿಷ್ಠ ವಯಸ್ಸಿನ ಮಿತಿ; ಮಹತ್ವದ ತೀರ್ಮಾನ ಕೈಗೊಂಡ ಅಬಕಾರಿ ಇಲಾಖೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯ ಖರೀದಿಗೆ ಕನಿಷ್ಠ ವಯಸ್ಸಿನ ಮಿತಿ; ಮಹತ್ವದ ತೀರ್ಮಾನ ಕೈಗೊಂಡ ಅಬಕಾರಿ ಇಲಾಖೆ

ಮದ್ಯ ಖರೀದಿಗೆ ಕನಿಷ್ಠ 21 ವರ್ಷಗಳಾಗಿರಬೇಕು ಎಂಬ ನಿಯಮ ರಾಜ್ಯದಲ್ಲಿದೆ. ಇದನ್ನು 18 ವರ್ಷಗಳಿಗೆ ಇಳಿಸಲು ಅಬಕಾರಿ ಇಲಾಖೆ ಮುಂದಾಗಿದೆ ಎಂಬ ಮಾತುಗಳು ಕೇಳಿ ಬಂದಿದ್ದವು.

ಇದಕ್ಕೆ ಪುಷ್ಟಿ ನೀಡುವಂತೆ ಅಬಕಾರಿ ಇಲಾಖೆಯು ಜನವರಿ 9 ರಂದು ಕರಡು ನಿಯಮಗಳ ಅಧಿಸೂಚನೆಯನ್ನು ಪ್ರಕಟಿಸಿದ್ದು, ಇದರಲ್ಲಿ ಮದ್ಯ ಖರೀದಿಗೆ ಕನಿಷ್ಠ ವಯಸ್ಸಿನ ಮಿತಿ ನಿಗದಿಪಡಿಸುವ ಸೆಕ್ಷನ್ ಗೆ ತಿದ್ದುಪಡಿ ಮಾಡುವ ಪ್ರಸ್ತಾವವನ್ನು ಸೇರಿಸಿತ್ತು.

ಇದಕ್ಕೆ ಸಾರ್ವಜನಿಕ ವಲಯದಿಂದ ತೀವ್ರ ವಿರೋಧ ಕೇಳಿ ಬಂದ ಹಿನ್ನೆಲೆಯಲ್ಲಿ ಮದ್ಯ ಖರೀದಿಗೆ ಕನಿಷ್ಠ ವಯಸ್ಸಿನ ಮಿತಿ ನಿಗದಿಪಡಿಸುವ ಕುರಿತಂತೆ ಅಬಕಾರಿ ಇಲಾಖೆ ಮಹತ್ವದ ತೀರ್ಮಾನ ಕೈಗೊಂಡಿದೆ.

ಈಗಿರುವ ಮದ್ಯ ಖರೀದಿಯ ಕನಿಷ್ಠ ವಯಸ್ಸಿನ ಮಿತಿ 21 ವರ್ಷಗಳನ್ನೇ ಮುಂದುವರಿಸಲು ತೀರ್ಮಾನಿಸಲಾಗಿದ್ದು, ಇದನ್ನು 18 ವರ್ಷಕ್ಕೆ ಇಳಿಸುವ ಪ್ರಸ್ತಾವನೆಯಿಂದ ಹಿಂದೆ ಸರಿದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...