ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಕಹೆ ಮುನ್ಸೂಚನೆ ನೀಡಿದೆ.
ದಕ್ಷಿಣ ಹಾಗೂ ಉತ್ತರ ಒಳನಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲಿಯೂ ಉತ್ತರ ಒಳನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಕೊಪ್ಪಳ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಅಲ್ಲಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಮಲೆನಾಡಿನ ಭಾಗ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಹಾಸನ ಜಿಲ್ಲೆಗಳಲ್ಲಿ ಕಡಿಮೆ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಅತಿ ಕಡಿಮೆ ಪ್ರಮಾಣದ ಮಳೆ ಸಾಧ್ಯತೆ ಇದೆ.
ಬೆಂಗಳೂರು ನಗರ ಹಾಗೂ ಸುತ್ತಮುತ್ತ ಮುಂದಿನ 24 ಗಂಟೆ ಮೋಡಕವಿದ ವಾತಾವರಣ ಇರಲಿದ್ದು, ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ.