ಬೆಂಗಳೂರು: ಸಿಐಎಸ್ಎಫ್ ಕಾನ್ಸ್ ಟೇಬಲ್ ಪತ್ನಿ ಮೇಲೆ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಎಂಟು ಮಂದಿ ಸಿಐಎಸ್ಎಫ್ ಕಾನ್ಸ್ ಟೇಬಲ್ ಗಳನ್ನು ವಜಾಗೊಳಿಸಿರುವುದನ್ನು ಹೈಕೋರ್ಟ್ ಎತ್ತಿಹಿಡಿದಿದೆ.
ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ಕಾನ್ಸ್ಟೇಬಲ್ ಪತ್ನಿಯ ಮೇಲೆ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ಮಾಡಲಾಗಿತ್ತು. 2015 ರಲ್ಲಿ ಕಾನ್ಸ್ಟೇಬಲ್ ಪತ್ನಿ ನೀಡಿದ ದೂರಿನ ಆಧಾರದಲ್ಲಿ ವಿಚಾರಣೆ ನಡೆಸಲಾಗಿದೆ.
ಪರಿಚಯ ಮಾಡಿಕೊಂಡು ಬ್ಲಾಕ್ಮೇಲ್ ಮಾಡಿ ಆರೋಪಿಗಳು ಅತ್ಯಾಚಾರವೆಸಗಿದ್ದರು. ಮತ್ತೊಬ್ಬರ ಸಂಬಂಧ ಬಹಿರಂಗಪಡಿಸುವುದಾಗಿ ಬೆದರಿಸಿ ಇಂತಹ ಕೃತ್ಯವೆಸಗಿದ್ದಾರೆ. ಹೀಗೆ ಎಂಟು ಮಂದಿ ಸಿಐಎಸ್ಎಫ್ ಸಿಬ್ಬಂದಿಯಿಂದ ದುಷ್ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ. ಸಿಐಎಸ್ಎಫ್ ನಲ್ಲಿ ಶಿಸ್ತು, ನೈತಿಕತೆಗೆ ಪ್ರಾಮುಖ್ಯತೆ ಇರುವ ಹಿನ್ನೆಲೆಯಲ್ಲಿ ಶಿಸ್ತು ಪ್ರಾಧಿಕಾರ 8 ಸಿಬ್ಬಂದಿಯನ್ನು ವಜಾಗೊಳಿಸಿದ್ದು, ಕ್ರಿಮಿನಲ್ ಪ್ರಕರಣದಲ್ಲಿ ಎಲ್ಲರೂ ಖುಲಾಸೆಗೊಂಡಿದ್ದರು. ವಜಾ ಆದೇಶ ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು.
ಇಂತಹ ಘಟನೆಗಳು ಕಾನ್ಸ್ಟೇಬಲ್ ಮನೋಸ್ಥೈರ್ಯವನ್ನು ಕುಗ್ಗಿಸುತ್ತವೆ. ಪತ್ನಿಯರನ್ನು ಬಿಟ್ಟು ತೆರಳುವ ಸಿಬ್ಬಂದಿಗೆ ಅಭದ್ರತೆ ಮೂಡಿಸುತ್ತದೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸದೆ ವಜಾಗೊಳಿಸಿರುವುದು ಸೂಕ್ತವಾಗಿದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಸಿಐಎಸ್ಎಫ್ ಕಾನ್ಸ್ ಟೇಬಲ್ ಪತ್ನಿ ಮೇಲೆ ಅತ್ಯಾಚಾರ ಆರೋಪದ ಮೇಲೆ ಪ್ರಾಧಿಕಾರ 8 ಸಿಐಎಸ್ಎಫ್ ಕಾನ್ಸ್ ಟೇಬಲ್ ಗಳನ್ನು ವಜಾ ಮಾಡಿರುವುದನ್ನು ಹೈಕೋರ್ಟ್ ಎತ್ತಿಹಿಡಿದಿದೆ.