alex Certify BIG NEWS: ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ: ಸಿಎಂ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬೆಂಗಳೂರು, ಮೈಸೂರು, ಬೆಳಗಾವಿಯಲ್ಲಿ ಜಾಗತಿಕ ನಾವೀನ್ಯತಾ ಪಾರ್ಕ್ ಸ್ಥಾಪನೆ: ಸಿಎಂ ಘೋಷಣೆ

ಬೆಂಗಳೂರು: ಭಾರತದ ಮೊದಲ ಗ್ಲೋಬಲ್ ಕೆಪೆಬಿಲಿಟಿ ಸೆಂಟರ್ ನೀತಿಯನ್ನು ಕರ್ನಾಟಕ ಜಾರಿಗೆ ತಂದಿದ್ದು, ನಮ್ಮ ಸರ್ಕಾರವು ಈ ಕೇಂದ್ರಗಳನ್ನು ಸಶಕ್ತಗೊಳಿಸಲು ಹಾಗೂ ಬೆಂಬಲಿಸಲು ಉದ್ದೇಶಿಸಿದೆ. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು ಹಾಗೂ ಬೆಳಗಾವಿಯಲ್ಲಿ ಮೂರು ಜಾಗತಿಕ ನಾವೀನ್ಯತಾ ಜಿಲ್ಲೆಗಳನ್ನು ಸ್ಥಾಪಿಸಲು ನಿರ್ಧರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ.

ಐಟಿ –ಬಿಟಿ ಇಲಾಖೆಯಿಂದ ಬೆಂಗಳೂರು ಅರಮನೆಯಲ್ಲಿ ಏರ್ಪಡಿಸಿರುವ ಮೂರು ದಿನಗಳ 27ನೇ ಆವೃತ್ತಿಯ ಬೆಂಗಳೂರು ತಂತ್ರಜ್ಞಾನ ಶೃಂಗ ಉದ್ಘಾಟಿಸಿ ಅವರು ಮಾತನಾಡಿದರು.

ಇಂಜಿನಿಯರಿಂಗ್ ಪ್ರತಿಭೆ ಮತ್ತು ಜಾಗತಿಕವಾಗಿ ಅತ್ಯಧಿಕ ಎ.ಐ ವೃತ್ತಿಪರರನ್ನು ಹೊಂದಿರುವ ಕರ್ನಾಟಕ ಜಿಸಿಸಿಗಳಿಗೆ ಅತ್ಯುತ್ತಮ ತಾಣವಾಗಿದೆ. ಎನ್.ಐ.ಪಿ.ಯು.ಎನ್.ಎ ಕರ್ನಾಟಕದಡಿ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸಲು ಸಿದ್ದರಿರುವ ಕಾರ್ಮಿಕಪಡೆಯನ್ನು ತಯಾರು ಮಾಡಲು ನಾವು ಕೈಗೊಂಡ ಯೋಜನೆಗಳು ಈ ವಲಯವನ್ನು ಮತ್ತಷ್ಟು ಬಲಪಡಿಸಲಿವೆ. ಈ ಸಂಬಂಧ ಮೈಕ್ರೋ ಸಾಫ್ಟ್, ಇಂಟೆಲ್, ಆಕ್ಸೆಂಚರ್, ಐ.ಬಿ.ಎಂ ಮತ್ತು ಬಿ.ಎಫ್.ಎಸ್ ಕಾಂಸಾರ್ಟಿಯಂ ಜೊತೆಗೆ ಐದು ಒಪ್ಪಂದಗಳಿಗೆ ಸಹಿ ಹಾಕಲಾಗಿದ್ದು, ಇವು ಕರ್ನಾಟಕದ ಒಂದು ಲಕ್ಷ ಯುವಜನರನ್ನು ಕೌಶಲ್ಯಯುತರನ್ನಾಗಿಸಲಿದೆ ಎಂದು ಹೇಳಿದ್ದಾರೆ.

2022ರಿಂದ 2023 ರವರೆಗೆ 18.2% ಏರಿಕೆಯನ್ನು ಕಂಡಿರುವ ಕರ್ನಾಟಕದ ಸ್ಟಾರ್ಟ್ಅಪ್ ಪರಿಸರ ಗಮನಾರ್ಹ ಸಾಧನೆ ಮಾಡಿದೆ. ರಾಜ್ಯದಲ್ಲಿ ಒಟ್ಟು 3,036 ಸ್ಟಾರ್ಟ್‌ಅಪ್‌ಗಳಿವೆ. ಭಾರತದ ಒಟ್ಟು ಸ್ಟಾರ್ಟ್‌ಅಪ್‌ಗಳಲ್ಲಿ 8.7% ಸ್ಟಾರ್ಟ್ ಅಪ್ ಗಳನ್ನು ಹೊಂದುವ ಮೂಲಕ ರಾಜ್ಯವು ಅಗ್ರಸ್ಥಾನದಲ್ಲಿದೆ. ಈ ಯಶಸ್ಸು ರಾಜ್ಯದಲ್ಲಿನ ಉದ್ಯಮಿಗಳಿಗೆ ಸರ್ಕಾರ ನೀಡುತ್ತಿರುವ ಬೆಂಬಲ ಮತ್ತು ಪ್ರೋತ್ಸಾಹದಾಯಕವಾದ ಅವಕಾಶಗಳನ್ನು ತೋರುತ್ತದೆ ಎಂದು ತಿಳಿಸಿದ್ದಾರೆ.

ಕೋಚನಹಳ್ಳಿಯಲ್ಲಿ ಎಲೆಕ್ಟ್ರಾನಿಕ್ಸ್ ಮ್ಯಾನುಫ್ಯಾಕ್ಚರಿಂಗ್ ಕ್ಲಸ್ಟರ್(EMC) ನ್ನು ಸ್ಥಾಪಿಸಲಾಗುವುದು. ಇದು ಜಾಗತಿಕ ಸೆಮಿಕಂಡಕ್ಟರ್ ಉದ್ಯಮದಲ್ಲಿ ಕರ್ನಾಟಕದ ಪಾತ್ರವನ್ನು ಮತ್ತಷ್ಟು ಹೆಚ್ಚಿಸುತ್ತದೆಯಲ್ಲದೆ ಉದ್ಯೋಗಗಳನ್ನು ಸೃಷ್ಟಿಸಿ, ನಗರ ಮತ್ತು ಗ್ರಾಮೀಣ ಪ್ರದೇಶಗಳ ಆರ್ಥಿಕ ಬೆಳವಣಿಗೆಗೆ ವೇಗ ನೀಡಲಿದೆ ಎಂದು ಹೇಳಿದ್ದಾರೆ.

ಇಂಡಿಯನ್ ವೆಂಚರ್ ಮತ್ತು ಆಲ್ಟರ್ನೇಟ್ ಕ್ಯಾಪಿಟಲ್ ಅಸೋಸಿಯೇಷನ್(IVCA) ಜೊತೆಗಿನ ನಮ್ಮ ಸಹಯೋಗದ ಮೂಲಕ 200ಕ್ಕೂ ಹೆಚ್ಚು ನವೋದ್ಯಮಗಳಿಗೆ 100 ಧನಸಹಾಯ ಸಂಸ್ಥೆಗಳಿಂದ ಬಂಡವಾಳ ಹೂಡಿಕೆ, ಮಾರ್ಗದರ್ಶನ ಕೊಡಿಸಲಾಗಿದ್ದು ಬೆಳವಣಿಗೆಯ ಅವಕಾಶಗಳನ್ನು ಒದಗಿಸಲಾಗಿದೆ ಎಂದು ಸಿಎಂ ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...