
ಬೆಂಗಳೂರು: ರಾಜ್ಯದಲ್ಲಿ ಸನ್ಸೇರಾ ಕಂಪನಿಯಿಂದ 2,100 ಕೋಟಿ ರೂ. ಹೂಡಿಕೆ ಮಾಡಲಿದ್ದು, 3,500 ಜನರಿಗೆ ಉದ್ಯೋಗ ದೊರಕಲಿದೆ ಎಂದು ಬೃಹತ್ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ರಾಜ್ಯ ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ. ನಮ್ಮ ಸರ್ಕಾರದ ಉದ್ಯಮಸ್ನೇಹಿ ನೀತಿಗಳು, ಪೂರಕ ವಾತಾವರಣ ಸೃಷ್ಟಿ ಮತ್ತು ಕೌಶಲ್ಯ ಹೊಂದಿರುವ ದುಡಿಯುವ ವರ್ಗದಿಂದಾಗಿ ಕರ್ನಾಟಕವು ದೇಶದಲ್ಲೇ ಹೂಡಿಕೆದಾರರ ನೆಚ್ಚಿನ ತಾಣವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿ ಸನ್ಸೇರಾ ಕಂಪನಿಯು 2,100 ಕೋಟಿ ರೂ. ಹೂಡಿಕೆ ಮಾಡುತ್ತಿದೆ. ಇದರಿಂದ 3,500 ಜನ ಸ್ಥಳೀಯರಿಗೆ ಉದ್ಯೋಗ ದೊರಕುತ್ತದೆ. ಉದ್ಯಮಗಳಿಗೆ ಪೂರಕ ವಾತಾವರಣ ನಿರ್ಮಿಸಿ ಹೂಡಿಕೆ ಆಕರ್ಷಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.