ಬೆಂಗಳೂರು : ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಅಳಿವಿನ ಅಂಚಿನಲ್ಲಿರುವ ಹುಲಿಗಳ ಬಗೆಗೆ ಅರಿವು ಮೂಡಿಸುವ ಮತ್ತು ಅವುಗಳ ಸಂತತಿ ಸಂರಕ್ಷಿಸುವ ಕುರಿತು ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29ರಂದು ವಿಶ್ವ ಹುಲಿ ದಿನಾಚರಣೆ ಆಚರಿಸಲಾಗುತ್ತಿದೆ.
ಹುಲಿ ನಮ್ಮ ರಾಷ್ಟ್ರೀಯ ಪ್ರಾಣಿಯಾಗಿದ್ದು, ವಿಶ್ವದ ಶೇ. 70ರಷ್ಟು ವ್ಯಾಘ್ರಗಳು ನಮ್ಮ ದೇಶದಲ್ಲೇ ಇವೆ. ಭಾರತದಲ್ಲೇ ಕರ್ನಾಟಕವು 2ನೇ ಅತಿ ಹೆಚ್ಚು ಹುಲಿಗಳನ್ನು ಹೊಂದಿರುವ ರಾಜ್ಯವಾಗಿರುವುದು ನಮಗೆಲ್ಲಾ ಹೆಮ್ಮೆಯ ಸಂಗತಿ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.