alex Certify ಮಾಸ್ಕ್ ಹಾಕಿಯೇ ಓಡಾಡಿ: ಮತ್ತೆ ಕಟ್ಟುನಿಟ್ಟಿನ ನಿಯಮ ಜಾರಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಾಸ್ಕ್ ಹಾಕಿಯೇ ಓಡಾಡಿ: ಮತ್ತೆ ಕಟ್ಟುನಿಟ್ಟಿನ ನಿಯಮ ಜಾರಿ

ಕೋವಿಡ್ ಸಾಂಕ್ರಾಮಿಕವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಲವಾರು ಕ್ರಮಗಳನ್ನು ಪ್ರಕಟಿಸಿದ್ದಾರೆ. ಇದರನ್ವಯ ಈ ಹಿಂದಿನಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

ಸರ್ಕಾರದ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ವಿಶ್ವದ ವಿವಿಧ ದೇಶಗಳಲ್ಲಿನ ಕೋವಿಡ್ ಸಾಂಕ್ರಾಮಿಕದ ಅಂಕಿ ಅಂಶಗಳ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದುಕೊಂಡರು.

ಕೋವಿಡ್ ಮತ್ತೆ ಕಾಣಿಸಿಕೊಳ್ಳುವ ಭೀತಿ ಇರುವ ಹಿನ್ನೆಲೆಯಲ್ಲಿ ಮುಂದಿನ ಆದೇಶದವರೆಗೆ ಈ ಹಿಂದಿನಂತೆಯೇ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯಗೊಳಿಸಲು ನಿರ್ಧರಿಸಲಾಗಿದೆ.

ಬೇಸಿಗೆಯಲ್ಲಿ ‘ಲಸ್ಸಿ’ ಕುಡಿಯುವುದರಿಂದ ಇದೆ ಇಷ್ಟೆಲ್ಲಾ ಉಪಯೋಗ

ಅದೇ ರೀತಿ, 2 ಅಡಿಗಳಷ್ಟು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮತ್ತು ಪ್ರಕರಣಗಳ ಸಂಖ್ಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದಕ್ಕೆ ಸೂಚನೆ ನೀಡಲಾಗಿದೆ.

ಇನ್ನು ಪ್ರಕರಣಗಳ ಸಂಖ್ಯೆ ಹೆಚ್ಚಿರುವ ಜಪಾನ್ ಮತ್ತು ಥೈಲ್ಯಾಂಡ್ ನಿಂದ ರಾಜ್ಯಕ್ಕೆ ಆಗಮಿಸುವ ಪ್ರಯಾಣಿಕರಿಗೆ ಟೆಲಿ ಮಾನಿಟರಿಂಗ್ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವುದನ್ನು ಹೆಚ್ವಿಸಲು ಪ್ರಚಾರ, ಮಾಹಿತಿ, ಶಿಕ್ಷಣ ಕಾರ್ಯಕ್ರಮವನ್ನು
ತೀವ್ರಗೊಳಿಸಲು ಸರ್ಕಾರ ನಿರ್ಧರಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...