ಬೆಂಗಳೂರು: ಬೆಂಗಳೂರು, ಮೈಸೂರು, ಕಲಬುರ್ಗಿ ಸೇರಿ ವಿವಿಧೆಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಲಬುರ್ಗಿಯಲ್ಲಿ ಆದಾಯಕ್ಕಿಂತ ಹೆಚ್ಚಿನ ಹಣ ಗಳಿಸಿದ ಆರೋಪ ಹಿನ್ನೆಲೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ವಾಹೇದ್ ಅಲಿ ಬಾತೆಖಾನಿ ನಿವಾಸದ ಮೇಲೆ ದಾಳಿ ನಡೆಸಲಾಗಿದೆ.
ಕಲಬುರ್ಗಿ ನಗರದ ನೂರ್ ಭಾಗ್ ಕಾಲೋನಿಯಲ್ಲಿರುವ ವಾಹೇದ್ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ, ಬ್ಯಾಂಕ್ ಪಾಸ್ ಬುಕ್, ದಾಖಲಾತಿ ಪರಿಶೀಲನೆ ನಡೆಸಲಾಗಿದೆ.
ಬೆಂಗಳೂರಿನ ಶಾಂತಿನಗರ, ಶಿವಾಜಿನಗರ, ಸದಾಶಿವನಗರ ಕಾಕ್ಸ್ ಟೌನ್ ಮತ್ತು ಮೈಸೂರಿನ ವಿವಿಧ ಕಡೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳಿಗೆ ಫಂಡ್ ಒದಗಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೂರುಗಳ ಅನುಸಾರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 20 ಕೋಟಿ ರೂ. ಗೂ ಅಧಿಕ ನಗದು, 5 ಕೋಟಿಗೂ ಅಧಿಕ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.