ನವದೆಹಲಿ: ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ -ಕಾಂಗ್ರೆಸ್ ಸರ್ಕಾರ ಪತನವಾಗುವಲ್ಲಿ ಪೆಗಾಸಸ್ ಕಣ್ಗಾವಲು ಇತ್ತು ಎಂಬ ಶಂಕೆ ವ್ಯಕ್ತವಾಗಿದೆ.
2019 ರಲ್ಲಿ ಸಮ್ಮಿಶ್ರ ಸರ್ಕಾವನ್ನು ಉರುಳಿಸುವ ಸಂದರ್ಭದಲ್ಲಿ ಪೆಗಾಸಸ್ ಕಣ್ಗಾವಲು ಇಡಲಾಗಿತ್ತು. ಅಂದಿನ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಡಿಸಿಎಂ ಜಿ. ಪರಮೇಶ್ವರ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಣ್ಗಾವಲು ನಡೆಸಲಾಗಿತ್ತು. ಅವರಿಗೆ ಸಂಬಂಧಿಸಿದ ಫೋನ್ ಸಂಖ್ಯೆಗಳ ಮೇಲೆ ನಿಗಾ ವಹಿಸಲಾಗಿತ್ತು ಎನ್ನಲಾಗಿದೆ.
ಕರ್ನಾಟಕದ ರಾಜಕಾರಣಿಗಳಿಗೆ ಸಂಬಂಧಿಸಿದ ಫೋನ್ ಸಂಖ್ಯೆಗಳು ಕೂಡ ಕಂಡು ಬಂದಿವೆ ಎನ್ನಲಾಗಿದ್ದು, ಕಾಂಗ್ರೆಸ್ ನಿಂದ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಜೆಡಿಎಸ್, ಕಾಂಗ್ರೆಸ್ ಸರ್ಕಾರ ಕೆಡವಲು ಪೆಗಾಸಸ್ ಗೂಢಚರ್ಯೆ ನಡೆಸಲಾಗಿತ್ತು. ಈ ಮೂಲಕ ಸಮ್ಮಿಶ್ರ ಸರ್ಕಾರ ಕೆಡವಿದ ಶಂಕೆ ವ್ಯಕ್ತವಾಗಿದೆ. ಕುಮಾರಸ್ವಾಮಿ, ಪರಮೇಶ್ವರ್, ಸಿದ್ಧರಾಮಯ್ಯ ಅವರ ವಿರುದ್ಧ ಗೂಢಚರ್ಯೆ ನಡೆಸಲಾಗಿದೆ ಎನ್ನಲಾಗಿದೆ. ಪೆಗಾಸಸ್ ದಾಖಲೆಗಳ ಅನ್ವಯ ಕರ್ನಾಟಕದ ಪ್ರಮುಖ ರಾಜಕಾರಣಿಗಳಿಗೆ ಸಂಬಂಧಿಸಿದ ಫೋನ್ ಸಂಖ್ಯೆ ಪತ್ತೆಯಾಗಿದೆ. ಮೈತ್ರಿ ಸರ್ಕಾರ ಕೆಡವಲು ಮಾಹಿತಿ ಸಂಗ್ರಹಿಸಿದ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಕಾಂಗ್ರೆಸ್ ನಾಯಕರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಬಹುದು ಎನ್ನಲಾಗಿದೆ.