alex Certify ಇದೇ ಮೊದಲ ಬಾರಿಗೆ ಲೋಕ ಅದಾಲತ್ ನಲ್ಲಿ ರಾಜೀ ಸಂಧಾನದ ಮೂಲಕ 40 ಲಕ್ಷ ಪ್ರಕರಣ ಇತ್ಯರ್ಥ: ಕಾನೂನು ಪ್ರಾಧಿಕಾರ ದಾಖಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇದೇ ಮೊದಲ ಬಾರಿಗೆ ಲೋಕ ಅದಾಲತ್ ನಲ್ಲಿ ರಾಜೀ ಸಂಧಾನದ ಮೂಲಕ 40 ಲಕ್ಷ ಪ್ರಕರಣ ಇತ್ಯರ್ಥ: ಕಾನೂನು ಪ್ರಾಧಿಕಾರ ದಾಖಲೆ

ಬೆಂಗಳೂರು: ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ರಾಜ್ಯಾದ್ಯಂತ ಜುಲೈ 13ರಂದು ಹಮ್ಮಿಕೊಂಡಿದ್ದ ಲೋಕ ಅದಾಲತ್ ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಇದ್ದ ವಿವಾದ ಪೂರ್ವ ಪ್ರಕರಣಗಳು ಸೇರಿ 40 ಲಕ್ಷ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.

ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಬಿ. ಕಾಮೇಶ್ವರ್ ರಾವ್ ಅವರು ಹೈಕೋರ್ಟ್ ಕಾನೂನು ಸೇವಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇದುವರೆಗೂ ಲೋಕ ಅದಾಲತ್ ನಲ್ಲಿ ಇಷ್ಟು ಪ್ರಮಾಣದಲ್ಲಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿರುವುದು ಇದೇ ಮೊದಲು. ಆ ಮೂಲಕ ಕಾನೂನು ಸೇವೆಗಳ ಪ್ರಾಧಿಕಾರ ದಾಖಲೆ ನಿರ್ಮಿಸಿದೆ ಎಂದು ತಿಳಿಸಿದ್ದಾರೆ.

ಹೈಕೋರ್ಟ್ ನ ಬೆಂಗಳೂರು, ಧಾರವಾಡ ಮತ್ತು ಕಲಬುರಗಿಯ 17 ನ್ಯಾಯಪೀಠಗಳು ಅದಾಲತ್ ನಲ್ಲಿ ಕಾರ್ಯನಿರ್ವಹಿಸಿ ರಾಜೀ ಸಂಧಾನದ ಮೂಲಕ 1655 ಪ್ರಕರಣ, ಜಿಲ್ಲಾ ಮತ್ತು ತಾಲೂಕು ಕೋರ್ಟ್ ಗಗಳಲ್ಲಿ ಒಟ್ಟು 40,01,786 ಪ್ರಕರಣ ಇತ್ಯರ್ಥಪಡಿಸಿ ವ್ಯಾಜ್ಯದಾರರಿಗೆ 2640 ಕೋಟಿ ರೂ. ಪರಿಹಾರ ಕೊಡಿಸಲಾಗಿದೆ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...