BREAKING : ಕರ್ನಾಟಕ ವಿಧಾನಪರಿಷತ್ತಿನ ಸಚಿವಾಲಯದ ಹುದ್ದೆಗಳ ಪರೀಕ್ಷೆಯ ಪರಿಷ್ಕ್ರತ ಕೀ ಉತ್ತರ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಖಾಲಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಗಳ ಪರಿಷ್ಕೃತ ಕೀ-ಉತ್ತರಗಳನ್ನು ಪ್ರಕಟಿಸಲಾಗಿದೆ.

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿನ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳಿಗೆ ದಿನಾಂಕ:22-03-2025 ರಿಂದ 25-03-2025ರ ವರೆಗೆ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ ಕೀ-ಉತ್ತರಗಳನ್ನು ದಿನಾಂಕ:25-03-2025 ರಂದು ಪ್ರಾಧಿಕಾರದ ವೆಬ್ಸೈಟ್ನಲ್ಲಿ ಪ್ರಕಟಿಸಿ ಸದರಿ ಕೀ-ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ:28-03-2025ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಅದರಂತೆ ಪ್ರಾಧಿಕಾರದಲ್ಲಿ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ ವಿಷಯ ತಜ್ಞರ ಸಮಿತಿಯ ಶಿಫಾರಸ್ಸಿನಂತೆ ಬದಲಾವಣೆಗೊಂಡ ಪತ್ರಿಕೆಗಳ ಪರಿಷ್ಕೃತ ಕೀ-ಉತ್ತರಗಳನ್ನು ಪ್ರಕಟಿಸಲಾಗಿದೆ.

Data Entry Assistant, ಪೇಪರ್-2 (ADEE25325) ಹುದ್ದೆಯ ಕೀ-ಉತ್ತರಗಳಿಗೆ ಯಾವುದೇ ಆಕ್ಷೇಪಣೆಗಳು ಸ್ವೀಕೃತವಾಗದ ಕಾರಣ ಕೀ-ಉತ್ತರಗಳಲ್ಲಿ ಯಾವುದೇ ಬದಲಾವಣೆಗಳು ಇರುವುದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read