
ಬೆಳಗಾವಿ: ಬಸ್ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದ ಬೆನ್ನಲ್ಲೇ ಕರ್ನಾಟಕ-ಮಹಾರಾಷ್ಟ್ರಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಮಹಾರಾಷ್ಟ್ರ-ಕರ್ನಾಟಕ ನಡುವೆ ಸಾರಿಗೆ ಬಸ್ ಸಂಚಾರ ಸ್ಥಗಿತಗೊಂಡಿದೆ.
ಕೊಲ್ಲಾಪುರದಲ್ಲಿ ಶಿವಸೇನೆ ಕರಯಕರ್ತರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಕರ್ನಾಟಕದಿಂದ ಕೊಲ್ಲಾಪುರಕ್ಕೆ ತೆರಳುವ ಎಲ್ಲಾ KSRTC ಬಸ್ ಗಳ ಸಂಚಾರ ಬಂದ್ ಆಗಿದೆ.
ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ತೆರಳುವ ಬಸ್ ಗಳು ಸಂಚರಿಸುತ್ತಿಲ್ಲ. ಈ ಮಾರ್ಗವಾಗಿ ಪ್ರತಿದಿನ 120 ಬಸ್ ಗಳು ಸಂಚಾರ ನಡೆಸುತ್ತಿದ್ದವು. ಆದರೆ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ.
ಇನ್ನು ಮಹಾರಾಷ್ಟ್ರದಿಂದ ಕರ್ನಾಟಕ್ಕೆ ಬರುವ ಬಸ್ ಗಳು ಸ್ಥಗಿತಗೊಂಡಿವೆ. ಇದರಿಂದಾಗಿ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.