ಬೆಳಗಾವಿ: ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕರ್ನಾಟಕ-ಮಹಾರಾಷ್ಟ್ರ ನಡುವೆ ಬಸ್ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ಮಹಾರಾಷ್ಟ್ರದಲ್ಲಿ ಮರಾಠಾ ಮೀಸಲಾತಿ ಪ್ರತಿಭಟನೆಯ ವೇಳೆ ಕಿಡಿಗೇಡಿಗಳು ಸೋಮವಾರ ಕರ್ನಾಟಕದ ಕೆಕೆಆರ್ ಟಿಸಿ ಬಸ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 31ರಿಂದ ಬೆಳಗಾವಿ ಭಾಗದಿಂದ ಹೊರಡುವ ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ವಿಭಾಗದಿಂದ ಮಹಾರಾಷ್ಟ್ರಕ್ಕೆ ತೆರಳುವ NWKRTCಯ 215ಕ್ಕೂ ಹೆಚ್ಚು ಬಸ್ ಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಮಹಾರಾಷ್ಟ್ರದ ಕೊಲ್ಲಾಪುರ ಮಾರ್ಗಕ್ಕೆ ತೆರಳುವ ಕೆ ಎಸ್ ಆರ್ ಟಿಸಿ ಬಸ್ ಗಳು ನಿಪ್ಪಾಣಿಯವರೆಗೆ ಮಾತ್ರ ಸಂಚರಿಸುತ್ತಿವೆ. ಮೀರಜ್ ಗೆ ತೆರಳುವ ಬಸ್ ಗಳು ಕಾಗವಾಡವರೆಗೆ ಮಾತ್ರ ಸಂಚರಿಸುತ್ತಿವೆ. ಮಹಾರಾಷ್ಟ್ರಕ್ಕೆ ಸಂಚರಿಸುವ ಸರಕಾರಿ ಬಸ್ ಗಳು ಬೇಳಗಾವಿ ಜಿಲ್ಲೆಯ ವಿವಿಧೆಡೆ ನಿಲ್ಲುತ್ತಿವೆ. ಖಾಸಗಿ ಬಸ್ ನವರು ದುಪ್ಪಟ್ಟು ಹಣ ಕೇಳುತ್ತಿದ್ದಾರೆ. ಬಸ್ ಸಂಚಾರ ಸ್ಥಗಿತವಾದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುತ್ತಿದ್ದಾರೆ.