![](https://kannadadunia.com/wp-content/uploads/2023/06/priyank-kharge1654339617.jpg)
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ಬಜೆಟ್ನಲ್ಲಿ ಕಲಬುರಗಿಯಲ್ಲಿ “ವಚನ ಸಂಗ್ರಹಾಲಯ” ಸ್ಥಾಪನೆಯ ಘೋಷಣೆ ಮಾಡಿರುವುದಕ್ಕೆ ಸಿಎಂಗೆ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ಪ್ರಿಯಾಂಕ್ ಖರ್ಗೆ, ಕರ್ನಾಟಕದ ಸಾಂಸ್ಕೃತಿಕ ನಾಯಕ ಗುರು ಬಸವಣ್ಣರವರು ಹಾಗೂ ನಾಡಿನ ಮಹಾನ್ ಶರಣರ ತತ್ವಗಳನ್ನು ಜಗತ್ತಿಗೆ ತಿಳಿಸುವ ಉದ್ದೇಶದಿಂದ ಬೆಂಗಳೂರು ಅಥವಾ ಕಲಬುರಗಿಯಲ್ಲಿ ‘ವಚನ ಮಂಟಪ’ ಹಾಗೂ ‘ವಚನ ವಿಶ್ವವಿದ್ಯಾಲಯ’ವನ್ನು ಸ್ಥಾಪಿಸುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಪತ್ರದ ಮೂಲಕ ಮನವಿ ಸಲ್ಲಿಸಿದ್ದೆ.
ಅದರಂತೆ ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಇಂದಿನ ಬಜೆಟ್ನಲ್ಲಿ ಕಲಬುರಗಿಯಲ್ಲಿ “ವಚನ ಸಂಗ್ರಹಾಲಯ” ಸ್ಥಾಪನೆಯ ಘೋಷಣೆ ಮಾಡಿದ್ದಾರೆ. ಇದರೊಂದಿಗೆ ಸೂಫಿಗಳ ಬದುಕು ಮತ್ತು ಸಂದೇಶಗಳ ಅಧ್ಯಯನ ಕೈಗೊಳ್ಳಲು ಕಲಬುರಗಿ ವಿಶ್ವವಿದ್ಯಾಲಯದಲ್ಲಿ ಮತ್ತು ಶಿವಯೋಗಿ ಸಿದ್ಧರಾಮೇಶ್ವರರವರ ಬದುಕು-ಬರಹ ಕುರಿತು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ “ಅಧ್ಯಯನ ಪೀಠ” ಸ್ಥಾಪಿಸುವ ನಿರ್ಧಾರ ಕೈಗೊಂಡಿದ್ದಾರೆ. ಈ ನಾಡಿನ ಮಹಾನ್ ಶರಣರ ತತ್ವಗಳನ್ನು ಜಗತ್ತಿಗೆ ಪಸರಿಸುವ ನಮ್ಮ ಧ್ಯೇಯಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು ಎಂದು ತಿಳಿಸಿದ್ದಾರೆ.
ಈ ನಾಡಿನ ಬೌದ್ಧಿಕ ಇತಿಹಾಸದಲ್ಲಿನ ಸಮಾನತೆಯ ತತ್ವಗಳನ್ನು ಮುಂದಿನ ಪೀಳಿಗೆಗೆ ಸಾರಲು ತತ್ವಾದರ್ಶಗಳನ್ನು ಒಗ್ಗೂಡಿಸಿಕೊಂಡು ಪ್ರಜಾಸತ್ತಾತ್ಮಕ ಆಡಳಿತ ನೀಡುವುದೇ ಕಾಂಗ್ರೆಸ್ ಸರ್ಕಾರದ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ.