alex Certify ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ; ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2024-25ನೇ ಸಾಲಿನಲ್ಲಿ ವಿವಿಧ ಯೋಜನೆಯಡಿ ಅರ್ಹ ಅಭ್ಯರ್ಥಿಗಳಿಂದ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಸ್ವಯಂ ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ ಉದ್ಯೋಗ ವೈಯಕ್ತಿಕ ಸಾಲ ಯೋಜನೆಯಡಿ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ನಿರುದ್ಯೋಗಿ ಫಲಾನುಭವಿಗಳು ಕೃಷಿ ಅವಲಂಬಿತ ಚಟುವಟಿಕೆ, ವ್ಯಾಪಾರ, ಕೈಗಾರಿಕೆ, ಸಾರಿಗೆ, ಮತ್ತು ಸೇವಾ ವಲಯದಲ್ಲಿ ಆರ್ಥಿಕ ಚಟುವಟಿಕೆ ಕೈಗೊಳ್ಳಲು ಗರಿಷ್ಠ 2 ಲಕ್ಷ ರೂ.ಗಳವರೆಗೆ ಆರ್ಥಿಕ ನೆರವು, 1 ಲಕ್ಷ ರೂ.ಗಳವರೆಗಿನ ಸಾಲದಲ್ಲಿ ಶೇ.20ರಷ್ಟು ಗರಿಷ್ಠ 20,000/- ರೂ ಗಳ ಸಹಾಯಧನ ಹಾಗೂ 1 ಲಕ್ಷದಿಂದ ರೂ. 2 ಲಕ್ಷ ರೂ.ದವರೆಗೆ ಶೇ.15 ರಷ್ಟು ಕನಿಷ್ಠ 20,000/- ರೂ.ಗಳವರೆಗೆ ಗರಿಷ್ಠ 30,000/- ರೂ. ಸಹಾಯಧನ ಉಳಿಕೆ ಮೊತ್ತ ಶೇ.4ರ ಬಡ್ಡಿದರದಲ್ಲಿ ನಿಗಮದಿಂದ ನೇರವಾಗಿ ಸಾಲ ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು.

ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ 1,20,000/- ರೂ.ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.

ಗಂಗಾ ಕಲ್ಯಾಣ ನೀರಾವರಿ ಯೋಜನೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ಸಣ್ಣ ಮತ್ತು ಅತಿ ಸಣ್ಣ ರೈತರ ಜಮೀನುಗಳಿಗೆ ನೀರಾವರಿ ಸೌಲಭ್ಯ ಒದಗಿಸಲಾಗುವುದು. ವೈಯಕ್ತಿಕ ಕೊಳವೆ ಬಾವಿ ಯೋಜನೆಗೆ ಒಟ್ಟು ಘಟಕ ವೆಚ್ಚ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ತುಮಕೂರು ಜಿಲ್ಲೆಗಳಿಗೆ4.75 ಲಕ್ಷ ರೂ.ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000/-ರೂ.ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು.

ಇನ್ನುಳಿದ ಜಿಲ್ಲೆಗಳಿಗೆ 3.75 ಲಕ್ಷ ರೂ.ಗಳು ಇದರಲ್ಲಿ ವಿದ್ಯುದ್ಧೀಕರಣ ವೆಚ್ಚ ಪ್ರತಿ ಕೊಳವೆ ಬಾವಿಗೆ 75,000/- ರೂ.ಗಳನ್ನು ಎಸ್ಕಾಂಗಳಿಗೆ ಪಾವತಿಸಲಾಗುವುದು. ಘಟಕ ಪೂರ್ಣಗೊಳಿಸಲು ಸಾಧ್ಯವಾಗದಿದ್ದಲ್ಲಿ 50,000/- ರೂ.ಗಳ ಸಾಲವನ್ನು ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು. ಈ ಯೋಜನೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಕನಿಷ್ಠ 1 ಎಕರೆ ಜಮೀನು ಹೊಂದಿರಬೇಕು. ಉಳಿಕೆ ಜಿಲ್ಲೆಗಳಲ್ಲಿ ಒಂದೇ ಸ್ಥಳದಲ್ಲಿ ಹೊಂದಿಕೊAಡAತೆ ಇರುವ ಕನಿಷ್ಠ 2 ಎಕರೆ ಗರಿಷ್ಠ 5 ಎಕರೆ ಜಮೀನು ಹೊಂದಿರಬೇಕು.

ಅರಿವು-ಶೈಕ್ಷಣಿಕ ಸಾಲ ಯೋಜನೆ: ಈ ಯೋಜನೆಯಡಿ ಅಇಖಿ ಮತ್ತು ಓಇಇಖಿ ಇತ್ಯಾದಿ ಮೂಲಕ ಆಯ್ಕೆಯಾಗಿ ವ್ಯಾಸಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್ಗಳಾದ ಇಂಜಿನಿಯರಿಂಗ್, ವೈದ್ಯಕೀಯ, ದಂತ ವೈದ್ಯಕೀಯ ಮುಂತಾದ 28 ಕೋರ್ಸ್ಗಳ ವ್ಯಾಸಂಗಕ್ಕೆ ವಾರ್ಷಿಕ 1.00 ಲಕ್ಷ ರೂ.ಗಳಂತೆ ಕೋರ್ಸ್ನ ಅವಧಿಗೆ ಗರಿಷ್ಠ 4.00ಲಕ್ಷ ರೂ.ಗಳಿಂದ ರೂ 5.00ಲಕ್ಷ ರೂ.ಗಳಿಗೆ ವಾರ್ಷಿಕ ಶೇ.2ರ ಬಡ್ಡಿದರಲ್ಲಿ ಸಾಲ ಮಂಜೂರು ಮಾಡಲಾಗುವುದು. ಅಭ್ಯರ್ಥಿ ಮತ್ತು ಅವರ ಕುಟುಂಬದವರ ವಾರ್ಷಿಕ ವರಮಾನವು 3.50 ಲಕ್ಷ ರೂ.ಗಳ ಮಿತಿಯಲ್ಲಿರಬೇಕು.

ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ: ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗ ಮಾಡಲು ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಪಿ.ಹೆಚ್.ಡಿ. ಪೋಸ್ಟ್ ಡಾಕ್ಟ್ರಲ್ ಮತ್ತು ಮಾಸ್ಟರ್ ಡಿಗ್ರಿ (ಇಂಜಿನಿಯರಿAಗ್ & ಟೆಕ್ನಾಲಜಿ, ಮ್ಯಾನೇಜ್ ಮೆಂಟ್ & ಕಾಮರ್ಸ್, ಸೈನ್ಸ್ & ಟೆಕ್ನಾಲಜಿ, ಅಗ್ರಿಕಲ್ಚರ್ & ಅಲೈಡ್ ಸೈನ್ಸಸ್/ಟೆಕ್ನಾಲಜಿ, ಮೆಡಿಸಿನ್, ಹ್ಯುಮ್ಯಾನಿಟೀಸ್ & ಸೋಸಿಯಲ್ ಸೈನ್ಸಸ್) ವ್ಯಾಸಂಗಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯ ಗರಿಷ್ಠ 8.00ಲಕ್ಷ ರೂ.ಗಳ ಮಿತಿಯಲ್ಲಿರಬೇಕು.

ವಿದ್ಯಾರ್ಥಿಗಳು ಅರ್ಹತಾ ಪರೀಕ್ಷೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚಿನ ಅಂಕ ಪಡೆದಿರಬೇಕು. QS World Ranking 500 ರೊಳಗೆ ಬರುವ ವಿಶ್ವ ವಿದ್ಯಾನಿಲಯಗಳಲ್ಲಿ ಪ್ರವೇಶ ಪಡೆದಿರಬೇಕು. ವಾರ್ಷಿಕ ಗರಿಷ್ಠ 10.00 ಲಕ್ಷ ಹಾಗೂ ಪೂರ್ಣ ಕೋರ್ಸ್ನ ಅವಧಿಗೆ 20.00 ಲಕ ರೂ.್ಷಗಳ ಸಾಲವನ್ನು ಬಡ್ಡಿರಹಿತವಾಗಿ ಒದಗಿಸಲಾಗುವುದು. ಸಾಲದ ಭದ್ರತೆಗೆ ನಿಗಮಕ್ಕೆ ಅರ್ಜಿದಾರ/ ಜಾಮೀನುದಾರ/ ಪೋಷಕರ ಸ್ಥಿರಾಸ್ತಿಯನ್ನು ನಿಗಮಕ್ಕೆ ಆಧಾರ ಮಾಡಬೇಕು. ಅರ್ಜಿಯ ಜೊತೆಯಲ್ಲಿ ವಿದೇಶಿ ವಿಶ್ವ ವಿದ್ಯಾಲಯದ ಪ್ರವೇಶ ಪತ್ರ (ಔಜಿಜಿeಡಿ ಐeಣಣeಡಿ) ವಿದ್ಯಾರ್ಥಿಯ ವಿಸಾ ಪಾಸ್ ಪೋರ್ಟ್ ಮತ್ತು ಏರ್ ಟಿಕೇಟ್ ಪ್ರತಿ ಒದಗಿಸಬೇಕು.

ಸ್ವಾವಲಂಬಿ ಸಾರಥಿ ಯೋಜನೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗದ ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ಸ್ವಾವಲಂಬಿ ಸಾರಥಿ ಯೋಜನೆಯಡಿ ನಾಲ್ಕು ಚಕ್ರಗಳ ವಾಹನ ಖರೀದಿಗೆ ಬ್ಯಾಂಕ್ಗಳಿಂದ ಪಡೆಯುವ ಸಾಲಕ್ಕೆ ಶೇ.50 ರಷ್ಟು, ಗರಿಷ್ಟ 3.00 ಲಕ್ಷ ರೂ.ಗಳ ಸಹಾಯಧನ ಮಂಜೂರು ಮಾಡಲಾಗುವುದು.

ಸೌಲಭ್ಯ ಪಡೆಯ ಬಯಸುವವರು ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ 98,000/- ರೂ.ಗಳು ಪಟ್ಟಣ ಪ್ರದೇಶದವರಿಗೆ 1,20,000/- ರೂ.ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 21 ರಿಂದ 45 ವರ್ಷಗಳ ಮಿತಿಯಲ್ಲಿರಬೇಕು. ಈ ಯೋಜನೆಯಲ್ಲಿ ಆರ್ಥಿಕ ಸಹಾಯ ಪಡೆಯಲು ಇಚ್ಚಿಸುವ ಅರ್ಜಿದಾರರು ಲಘು ವಾಹನ ಚಾಲನ ಪರವಾನಗಿಯನ್ನು ಹೊಂದಿರಬೇಕು.

ಸ್ವಯಂ ಉದ್ಯೋಗ ಸಾಲ ಯೋಜನೆ: ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಿಗೆ ಸ್ವಯಂ ಉದ್ಯೋಗ ಕಲ್ಪಿಸಿಕೊಳ್ಳಲು ಅವರು ಕೈಗೊಳ್ಳುವ ಆರ್ಥಿಕ ಚಟುವಟಿಕೆಗಳು ಅಥವಾ ಉದ್ಯಮಗಳಿಗೆ ವಾಣಿಜ್ಯ ಬ್ಯಾಂಕುಗಳ ಮೂಲಕ ಸಾಲ ಪಡೆದಲ್ಲಿ ನಿಗಮದಿಂದ ಶೇ.20ರಷ್ಟು ಗರಿಷ್ಠ 1.00 ಲಕ್ಷ ರೂ.ಗಳ ಸಹಾಯಧನ ಮಂಜೂರು ಮಾಡಲು ಉಳಿಕೆ ಮೊತ್ತವನ್ನು ಬ್ಯಾಂಕ್ನಿಂದ ಸಾಲ ಪಡೆಯುವ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಪ್ರವರ್ಗ-1ರ ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಕ್ಕೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ.98,000/-ಗಳು ಪಟ್ಟಣ ಪ್ರದೇಶದವರಿಗೆ ರೂ.1,20,000/-ಗಳ ಒಳಗಿರಬೇಕು, ಅರ್ಜಿದಾರರ ವಯಸ್ಸು 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು,

ಈ ಎಲ್ಲಾ ಯೋಜನೆಗಳಡಿಯಲ್ಲಿ ಸೌಲಭ್ಯ ಒದಗಿಸಲು ಸೇವಾ ಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ನಲ್ಲಿರುವಂತೆ ಅರ್ಜಿದಾರರ ಹೆಸರು, (ಶ್ರೀ/ಶ್ರೀಮತಿ ಕುಮಾರಿ ಮುಂತಾದ ಮಾಹಿತಿಗಳೆಲ್ಲವು) ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದು ಹೊಂದಾಣಿಕೆಯಾಗಬೇಕು.

ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವ ಫಲಾಪೇಕ್ಷಿಗಳು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಅರ್ಜಿದಾರರು ಅರ್ಜಿಗಳನ್ನು ಸೇವಾಸಿಂಧು ಪೋರ್ಟಲ್ http://sevasindhu.karnataka.gov.in ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಇದೇ 2024ರ ಆಗಸ್ಟ್ 31ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿ ನಿಗಮದ ಸಹಾಯವಾಣಿ ಸಂಖ್ಯೆ: 080-22374832 ಮತ್ತು 8050770004 ಅಥವಾ 8050770005 ಅಥವಾ ಜಿಲ್ಲಾ ವ್ಯವಸ್ಥಾಪಕರ ದೂರವಾಣಿ ಸಂಖ್ಯೆ: 08532-250440ಗೆ ಸಂಪರ್ಕಿಸುವAತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...