
ಕರ್ನಾಟಕ ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ನವೆಂಬರ್ 6 ಕೊನೆಯ ದಿನವಾಗಿದ್ದು, ಅರ್ಹ ಪದವೀಧರರು ಹೆಚ್ಚಿನ ಆಸಕ್ತಿ ವಹಿಸಿ ತಮ್ಮ ಹೆಸರನ್ನು ಮತದಾರ ಪಟ್ಟಿಯಲ್ಲಿ ನೋಂದಾಯಿಸಿಕೊಂಡು, ಸುಭದ್ರ ಹಾಗೂ ಜನ ಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕೆಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಜಿಲ್ಲೆಯ ಎಲ್ಲಾ ಅರ್ಹ ಮತದಾರರಲ್ಲಿ ಮನವಿ ಮಾಡಿದ್ದಾರೆ.
ಅರ್ಜಿದಾರರು ಅರ್ಹತಾ ದಿನಾಂಕ 01.11.2023 ಕ್ಕಿಂತ 3 ವರ್ಷಗಳ ಪೂರ್ವದಲ್ಲಿ ಅಂದರೆ 01.11.2020 ಕ್ಕಿಂತ ಮುಂಚೆ ಭಾರತದ ಯಾವುದೇ ವಿಶ್ವವಿದ್ಯಾಲಯದಿಂದ ಪದವೀಧರರಾಗಿರತಕ್ಕದ್ದು ಅಥವಾ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರ ಪ್ರಕರಣ 27 ಉಪಪ್ರಕರಣ 3(ಎ)ರನ್ವಯ ಭಾರತ ಚುನಾವಣಾ ಆಯೋಗದ ಸಹಮತದೊಂದಿಗೆ ರಾಜ್ಯ ಸರ್ಕಾರವು ವಿಶ್ವವಿದ್ಯಾಲಯದ ಪದವಿಗೆ ತತ್ಸಮಾನವೆಂದು ನಿರ್ದಿಷ್ಟ ಪಡಿಸಿದ ವಿದ್ಯಾರ್ಹತೆಯನ್ನು ಹೊಂದಿರಬೇಕು. ದಿನಾಂಕ 01.11.2020 ಕ್ಕಿಂತಲೂ ಮೊದಲು ಪದವಿ ಪಡೆದಿರುವಂತಹ ಪದವೀಧರರು ನಿಗದಿಪಡಿಸಿದ ನಮೂನೆ 18 ರಲ್ಲಿ (ಭಾವಚಿತ್ರದೊಂದಿಗೆ) ಭರ್ತಿ ಮಾಡಿದ ಅರ್ಜಿಯೊಂದಿಗೆ ಕಡ್ಡಾಯವಾಗಿ ತಾವು ಉತ್ತೀರ್ಣರಾಗಿರುವ ಅಂಕಪಟ್ಟಿಯನ್ನು ಪತ್ರಾಂಕಿತ ಅಧಿಕಾರಿಯಿಂದ ದೃಢೀಕರಿಸಿ ಮತ್ತು ಆಧಾರ್‌ಕಾರ್ಡ್, ಚುನಾವಣಾ ಗುರುತಿನ ಚೀಟಿಯನ್ನು ಹಾಗೂ ತಾವು ವಾಸಿಸುತ್ತಿರುವ ವಾಸಸ್ಥಳದ ದಾಖಲೆಗಳನ್ನು ಸ್ವಯಂ ಧೃಡೀಕರಿಸಿ ಅರ್ಜಿಯೊಂದಿಗೆ ದಿನಾಂಕ: 06.11.2023ರ ಒಳಗಾಗಿ ತಹಶೀಲ ಕಾರ್ಯಾಲಯದಲ್ಲಿ ಸಲ್ಲಿಸಬಹುದು. ಫಾರಂ-18ರ ಅರ್ಜಿಗಳನ್ನು ತಹಶೀಲ್ದಾರ ಕಾರ್ಯಾಲಯದಿಂದ ಪಡೆಯಬಹುದು ಅಥವಾ
https://ceo.karnataka.gov.in/342/forms/kn ರ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ.