
ನವದೆಹಲಿ: ಮಹಾರಾಷ್ಟ್ರ ಮಾದರಿಯಲ್ಲಿ ಕರ್ನಾಟಕ ರಾಜಕೀಯದಲ್ಲಿಯೂ ಅಜಿತ್ ಪವಾರ್, ಶಿಂಧೆ ಇದ್ದಾರೆ. ಯಾರು ಮೊದಲು ಬರುತ್ತಾರೆ ಎನ್ನುವುದನ್ನು ಕಾದು ನೋಡಬೇಕಿದೆ. ಯಾವಾಗ ಏನು ಬೇಕಾದರೂ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಲೋಕಸಭೆ ಚುನಾವಣೆ ಬಳಿಕ ರಾಜ್ಯ ಕಾಂಗ್ರೆಸ್ ಸರ್ಕಾರ ಉರುಳುತ್ತಾ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು.
ಕಾಂಗ್ರೆಸ್ ಶಾಸಕರಲ್ಲಿ ಅಸಮಾಧಾನವಿದೆ. ಯಾವಾಗ ಏನು ಬೇಕಾದರೂ ಆಗಬಹುದು. ಕರ್ನಾಟಕ ರಾಜಕೀಯದಲ್ಲಿ ಶಿಂಧೆಯೂ ಇದ್ದಾರೆ. ಅಜಿತ್ ಪವಾರ್ ಕೂಡಾ ಇದ್ದಾರೆ. ಯಾರು ಮೊದಲು ಬರುತ್ತಾರೆ ಎಂದು ಕಾದು ನೋಡೋಣ. ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದ ರಾಜಕೀಯದಲ್ಲಿ ಏನಾದರೂ ಆಗಬಹುದು ಎಂದು ಹೇಳಿದ್ದಾರೆ.