ಮಂಗಳೂರು: ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲು ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳನ್ನು ಹೆಚ್ಚಿಸಲು ದೊಡ್ಡ ಮಟ್ಟದ ಅನುದಾನ ಅಗತ್ಯವಿದೆ. ಹೀಗಾಗಿ ಸೂಕ್ತ ಕ್ರಮ ಕೈಗೊಂಡು ಮುಂದಿನ ವರ್ಷದಿಂದ ಸರ್ಕಾರಿ ಶಾಲೆಗಳಿಗೆ ಉತ್ತೇಜನ ನೀಡಲಾಗುವುದು. ಕರ್ನಾಟಕ ಪಬ್ಲಿಕ್ ಸ್ಕೂಲ್ ಮತ್ತು ನವೋದಯ ಶಾಲೆಗಳನ್ನು ಹೆಚ್ಚಳ ಮಾಡಲಾಗುವುದು ಎಂದು ಹೇಳಿದ್ದಾರೆ.