ಬೆಂಗಳೂರು: ವಾಣಿಜ್ಯ ತೆರಿಗೆ ಇಲಾಖೆಯಲ್ಲಿರುವ 230 ವಾಣಿಜ್ಯ ತೆರಿಗೆ ಪರಿವೀಕ್ಷಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನೀಡಲಾಗಿದ್ದ ಕೊನೆಯ ದಿನಾಂಕವನ್ನು ಅಕ್ಟೋಬರ್ 31 ರವರೆಗೆ ಕರ್ನಾಟಕ ಲೋಕಸೇವಾ ಆಯೋಗ ವಿಸ್ತರಿಸಿದೆ.
ಈ ಮೊದಲು ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 30 ಕೊನೆಯ ದಿನವಾಗಿತ್ತು. ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಕೆಗೆ ತೊಂದರೆಯಾದ ಹಿನ್ನೆಲೆಯಲ್ಲಿ ಲೋಕ ಸೇವಾ ಆಯೋಗ ಕೊನೆಯ ದಿನಾಂಕವನ್ನು ವಿಸ್ತರಿಸಿದೆ.
ಈ ಹಿಂದೆ ನಿಗದಿಪಡಿಸಲಾಗಿದ್ದ ಪರೀಕ್ಷಾ ದಿನಾಂಕಗಳನ್ನು ಬದಲಾಯಿಸಲಾಗಿದೆ. 2024ರ ಜನವರಿ 6, 7ರಂದು ಕಲ್ಯಾಣ ಕರ್ನಾಟಕ, ಜನವರಿ 20 ಮತ್ತು 21 ರಂದು ರಾಜ್ಯದ ಉಳಿದ ಜಿಲ್ಲೆಗಳ ಅಭ್ಯರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಕೆ.ಎಸ್. ಲತಾಕುಮಾರಿ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.