ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮುಂದಿನ 5 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಹಾಗೂ ಉತ್ತರ ಒಳನಾಡಿನ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ರಾಜಧಾನಿ ಬೆಂಗಳೂರಿನಲ್ಲಿ ಚಳಿ ಹೆಚ್ಚಾಗಲಿದ್ದು, ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದೆ.
ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣೆ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ನ.3ರವರೆಗೆ ಸಾಧಾರಣ ಮಳೆ ಬಳಿಕ ತುಂತುರು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಚದುರಿದ ಮಳೆಯಾಗಲಿದೆ.
ಇಂದಿನಿಂದ ನವೆಂಬರ್ 5ರವರೆಗೆ ಕೃಷ್ಣಾ ಜಲಾಸ್ನಯನ ಪ್ರದೇಶಗಳಲ್ಲಿ ಅಲ್ಲಲ್ಲಿ ಚದುರಿದ ಮಳೆ, ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಅ.31ರಿಂದ ನವೆಂಬರ್ 3ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಹವಾಮಾನ ಬದಲಾವಣೆಯಿಂದಾಗಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವ ಅಗತ್ಯವಿದೆ.