alex Certify ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ; 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಗಾಳಿ, ತಾಪಮಾನ ಹೆಚ್ಚುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ದಾವಣಗೆರೆ, ಕೋಲಾರ, ತುಮಕೂರು, ವಿಜಯನಗರ ಜಿಲೆಗಳಲ್ಲಿ ಮಳೆಯಾಗಲಿದೆ.

ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ರಾಯಚೂರು, ವಿಜಯಪುರ, ಬಾಗಲಕೋಟೆ, ಕಲಬುರ್ಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಹೆಚ್ಚುವ ಸಾಧ್ಯತೆಯೂ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...