alex Certify Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮಳೆಯ ಅಬ್ಬರ ಮುಂದುವರೆಯಲಿದ್ದು, ಇಂದು ಮತ್ತು ನಾಳೆ ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಸೆಪ್ಟೆಂಬರ್ 3ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಸೇರಿದಂತೆ, ಉತ್ತರ ಕರ್ನಾಟಕದ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಯಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...