alex Certify Karnataka Rain : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಭಾಗಗಳಾದ, ದಕ್ಷಿಣ ಕನ್ನಡ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಗಳಿವೆ. ಅಲ್ಲದೇ ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು,  ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...