ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ಮಳೆರಾಯನ ಆರ್ಭಟ ತಗ್ಗಿದ್ದು, ಇಂದಿನಿಂದ ಮತ್ತೆ ಮಳೆ ಬಿರುಸಾಗಲಿದೆ. ಮುಂದಿನ ಎರಡು ದಿನ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 20ರವರೆಗೆ ಭಾರಿ ಮಳೆಯಾಗಲಿದೆ,.ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಬೆಳಗಾವಿ, ಬೀದರ್, , ಹಾವೇರಿ, ಧಾರವಾಡ, ಗದಗ ಕಲಬುರಗಿ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ. ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಸೇರಿದಂತೆ ಹಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗಲಿದೆ.ಹಾಸನ, ಕೊಡಗು ಜಿಲ್ಲೆಯ ಕೆಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.