alex Certify Karnataka Rain : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

Karnataka Rain : ಕರಾವಳಿಯಲ್ಲಿ ಮುಂದಿನ 5 ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಉತ್ತರ ಕರ್ನಾಟಕದ ಧಾರವಾಡ, ಗದಗ, ಬೆಳಗಾವಿ, ಹಾವೇರಿ, ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...