ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಕರಾವಳಿಯ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ 20 ದಿನಗಳಿಂದ ದುರ್ಬಲಗೊಂಡಿದ್ದ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ಬೆಂಗಳೂರು, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ ಸೇರಿದಂತೆ ರಾಜ್ಯದ ಹಲವಡೆ ಶನಿವಾರ ಮಳೆಯಾಗಿದೆ. ಈ ಮೂಲಕ ಮಳೆಯ ನಿರೀಕ್ಷೆಯಲ್ಲಿದ್ದ ರೈತರ ಮೊಗದಲ್ಲಿ ಸಂತಸ ಮೂಡಿಸಿದೆ.
ಇಂದು ಕರಾವಳಿಯ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಇಂದು ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.