
ಬೆಂಗಳೂರು: ಕರಾವಳಿ ಜಿಲ್ಲೆಗಳು ಸೇರಿದಂತೆ ರಾಜ್ಯದ ಹಲವಡೆ ಮುಂದಿನ 4 ದಿನ ಈ ರಾಜ್ಯಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಆಗಸ್ಟ್ 30ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಒಳನಾಡಿನ ಜಿಲ್ಲೆಗಳು ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿಯ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ. ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ. ಉಳಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.