ಬೆಂಗಳೂರು : ರಾಜ್ಯದ ಹಲವಡೆ ಮಳೆಯ ಅಬ್ಬರ ಕಡಿಮೆಯಾಗಿದ್ದು, ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದೊಂದು ವಾರದಿಂದ ರಾಜ್ಯಾದ್ಯಂತ ಅಬ್ಬರಿಸಿದ್ದ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆ ಆಗಲಿದ್ದು, ಮುಂದಿನ ಒಂದು ವಾರ ಸಾಧಾರಣ ಮಳೆ ಆಗಲಿದೆ. ಆದರೆ ಕರಾವಳಿಯ ಮೂರು ಜಿಲ್ಲೆಗಳಿಗೆ ಇಂದು ಹಾಗೂ ಆಗಸ್ಟ್ 1 ಹಾಗೂ 2 ರಂದು ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸುಮಾರು 12 ದಿನಗಳ ಬಳಿಕ ಕರಾವಳಿ ಜಿಲ್ಲೆಗಳು ಹಾಗೂ ಮಲೆನಾಡಿನಲ್ಇ ಮಳೆಯ ಅಬ್ಬರ ಸಂಪೂರ್ಣ ಇಳಿದಿದ್ದು, ಶುಕ್ರವಾರ ಬಿಸಿಲಿನ ದರ್ಶನವಾಗಿದೆ. ಹಲವು ನದಿಗಳ ಪ್ರವಾಹ ಇಳಿಕೆಯಾಗಿದ್ದು, 12 ರಿಂದ 14 ಸೇತುವೆಗಳು ಬಹುತೇಕ ಇಂದು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆ ಇದೆ.