alex Certify ಡಾ. ರಾಜಕುಮಾರ್, ಅಪ್ಪು ಸೇರಿ ಇದುವರೆಗೆ 10 ಮಂದಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡಾ. ರಾಜಕುಮಾರ್, ಅಪ್ಪು ಸೇರಿ ಇದುವರೆಗೆ 10 ಮಂದಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ರಾಜ್ಯದ ಅತ್ಯುನ್ನತ ನಾಗರಿಕ ಪುರಸ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ಘೋಷಿಸಲಾಗಿದೆ.

ಪುನೀತ್ ರಾಜ್ ಕುಮಾರ್ ಸೇರಿದಂತೆ 10 ಮಂದಿಗೆ ಇದುವರೆಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ. ಯಾವುದೇ ಕ್ಷೇತ್ರದಲ್ಲಿ ಅತ್ಯಂತ ವಿಶಿಷ್ಟ ಸೇವೆ ಸಲ್ಲಿಸಿದ ಗಣ್ಯರಿಗೆ ರಾಜ್ಯ ಸರ್ಕಾರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಿದೆ.

1992 ರಿಂದ ‘ಕರ್ನಾಟಕ ರತ್ನ’ ಪ್ರಶಸ್ತಿ ಸ್ಥಾಪಿಸಲಾಗಿದ್ದು, ಮೊದಲ ಪ್ರಶಸ್ತಿಯನ್ನು ಸಾಹಿತ್ಯ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ರಾಷ್ಟ್ರಕವಿ ಕುವೆಂಪು ಮತ್ತು ಸಿನಿಮಾ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ವರನಟ ಡಾ. ರಾಜಕುಮಾರ್ ಅವರಿಗೆ 1992 ರಲ್ಲಿ ನೀಡಲಾಗಿದೆ.

1999 ರಲ್ಲಿ ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪ, 2000 ರಲ್ಲಿ ಖ್ಯಾತ ವಿಜ್ಞಾನಿ ಡಾ. ಸಿ.ಎನ್. ರಾವ್, 2001 ರಲ್ಲಿ ಖ್ಯಾತ ವೈದ್ಯ ಡಾ. ದೇವಿಶೆಟ್ಟಿ, 2005 ರಲ್ಲಿ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ಭೀಮಸೇನ ಜೋಶಿ, 2007 ರಲ್ಲಿ ಸಿದ್ಧಗಂಗಾ ಮಠದ ಡಾ. ಶಿವಕುಮಾರ ಸ್ವಾಮೀಜಿ, 2008 ರಲ್ಲಿ ಡಾ. ಜವರೇಗೌಡ, 2009 ರಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಲಾಗಿದೆ.

ಸಿನಿಮಾ ಹಾಗೂ ಸಾಮಾಜಿಕ ಸೇವೆ ಪರಿಗಣಿಸಿ ಪುನೀತ್ ರಾಜಕುಮಾರ್ ಅವರಿಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...