![](https://kannadadunia.com/wp-content/uploads/2021/11/dengue-3-1561542478.jpg)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಆತಂಕದ ನಡುವೆಯೇ ಡೆಂಘೆ ಜ್ವರದ ಪ್ರಕರಣಗಳು ಹೆಚ್ಚಳವಾಗಿವೆ. ಒಂದೇ ವಾರದಲ್ಲಿ 263 ಡೆಂಘೆ ಪ್ರಕರಣಗಳು ವರದಿಯಾಗಿವೆ.
ರಾಜ್ಯದಲ್ಲಿ ಈ ವರ್ಷ ಎರಡು ಲಕ್ಷಕ್ಕೂ ಹೆಚ್ಚು ಡೆಂಘೆ ಶಂಕಿತರ ತಪಾಸಣೆ ನಡೆಸಲಾಗಿದ್ದು, ಈ ಪೈಕಿ ಬಿಬಿಎಂಪಿ ವ್ಯಾಪ್ತಿಯಲ್ಲಿ 8,397 ಹಾಗೂ ರಾಜ್ಯದ ಇತರೆ ಜಿಲ್ಲೆಗಳಿಂದ 7,792 ಪ್ರಕರಣಗಳು ಸೇರಿ ಒಟ್ಟು 16,189 ಪ್ರಕರಣಗಳು ದಾಖಲಾಗಿವೆ.
ಕಲಬುರಗಿಯಲ್ಲಿ ಅತಿ ಹೆಚ್ಚು 725 ಡೆಂಘೆ ಪ್ರಕರಣಗಳು ದಾಖಲಾಗಿದ್ದರೆ, ಮೈಸೂರಿನಲ್ಲಿ 688, ಉಡುಪಿ 635, ದಕ್ಷಿಣ ಕನ್ನಡ 499, ಶಿವಮೊಗ್ಗ 431ಡೆಂಘೆ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 9 ಜನರು ಡೆಂಘೆ ಜ್ವರಕ್ಕೆ ಬಲಿಯಾಗಿದ್ದಾರೆ.