5, 8 ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕುರಿತು ಮುಖ್ಯ ಮಾಹಿತಿ

ಬೆಂಗಳೂರು: 5 ಮತ್ತು 8ನೇ ತರಗತಿಯ ಮೌಲ್ಯಾಂಕನ ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ ಎಂದು ಕರ್ನಾಟಕ ಶಾಲಾ ಗುಣಮಟ್ಟ ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ ನಿಂದ ಪ್ರಕಟಣೆ ನೀಡಲಾಗಿದೆ.

ಐದು ಮತ್ತು ಎಂಟನೇ ತರಗತಿಯ ಮೌಲ್ಯಾಂಕನದಲ್ಲಿ ಯಾವುದೇ ವಿದ್ಯಾರ್ಥಿಯನ್ನು ಅನುತ್ತೀರ್ಣಗೊಳಿಸುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳನ್ನು ಮುಂದಿನ ತರಗತಿಗೆ ತೇರ್ಗಡೆಗೊಳಿಸಲಾಗುವುದು. ಐದು ಮತ್ತು ಎಂಟನೇ ತರಗತಿಯ ಮೌಲ್ಯಂಕನ ವಾರ್ಷಿಕ ಪರೀಕ್ಷೆಯಾಗಿರುವುದಿಲ್ಲ ಇದು ಕೇವಲ ಮೌಲ್ಯಾಂಕನವಾಗಿರುತ್ತದೆ.

ಈ ಮೌಲ್ಯಾಂಕನದ ಮೂಲಕ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ, ಕಲಿಕಾ ನ್ಯೂನ್ಯತೆ, ಕಲಿಕಾ ಪ್ರಗತಿಗಳನ್ನು ತಿಳಿದುಕೊಂಡು ಮುಂದಿನ ಶೈಕ್ಷಣಿಕ ವರ್ಷಕ್ಕೆ ಕಲಿಕಾ ಕೊರತೆ ನೀಗಿಸಲು ಶೈಕ್ಷಣಿಕ ಕಾರ್ಯಕ್ರಮ ಹಮ್ಮಿಕೊಳ್ಳುವುದು ಇದರ ಉದ್ದೇಶವಾಗಿದೆ.

ಈ ಮೌಲ್ಯಾಂಕನದ ಫಲಿತಾಂಶವನ್ನು ಸಂಬಂಧಿಸಿದ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ತಿಳಿಸಲಾಗುವುದು. ಆ ಮೂಲಕ ಫಲಿತಾಂಶದ ಗೌಪ್ಯತೆ ಕಾಪಾಡಲಾಗುವುದು. ಪಠ್ಯಪುಸ್ತಕವನ್ನು ಆಧರಿಸಿ ಮೌಲ್ಯಂಕನಕ್ಕೆ ಪ್ರಶ್ನೆಗಳನ್ನು ಸಿದ್ಧಪಡಿಸಲಾಗಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read