ಬೆಂಗಳೂರು: ಕರ್ನಾಟಕದ ಕೌಶಲ್ಯ ಅಭಿವೃದ್ಧಿ ನಿಗಮ ವತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆಬ್ರವರಿ 26, 27ರಂದು ರಾಜ್ಯಮಟ್ಟದ ಬೃಹತ್ ಉದ್ಯೋಗ ಮೇಳ ಏರ್ಪಡಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಎಲ್ಲಾ ರೀತಿಯ ವಿದ್ಯಾರ್ಹತೆಗೆ ಸಂಬಂಧಿಸಿದಂತೆ 50 ಸಾವಿರಕ್ಕೂ ಅಧಿಕ ಉದ್ಯೋಗ ಆಕಾಂಕ್ಷಿಗಳು, 500ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುವ ಸಾಧ್ಯತೆ ಇದೆ.
ತಮ್ಮ ಸಂಸ್ಥೆಯಿಂದ ಪ್ರದರ್ಶನ ಮಳಿಗೆಗೆ ನೋಂದಣಿ ಮಾಡಿಸಿಕೊಳ್ಳಲು http://tinyurl.com/Udyoga-Mela-Exahibition-Stalls, ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಇ-ಮೇಲ್ udyogamela.ksdc@karnataka.gov.in ಫೆಬ್ರವರಿ 12ರೊಳಗೆ ಮಾಹಿತಿ ಸಲ್ಲಿಸಲು ತಿಳಿಸಲಾಗಿದೆ.