ಅಕ್ಟೋಬರ್ 1ರ ಬಳಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಿವೆ ಎಂದು ಘೋಷಿಸಿದ ರಾಜ್ಯ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, “ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಮರುಚಾಲನೆ ನೀಡಲು ನಾವು ಯೋಚಿಸಿದ್ದು, ಈ ಸಂಬಂಧ ಶೀಘ್ರದಲ್ಲೇ ನಿರ್ಣಯ ತೆಗೆದುಕೊಳ್ಳಲಿದ್ದೇವೆ,” ಎಂದಿದ್ದಾರೆ.
ಕೋವಿಡ್ ಸೋಂಕು ವ್ಯಾಪಕವಾದ ಕಾರಣದಿಂದ ಸಾರ್ವಜನಿಕ ನಿರ್ದೇಶನಾ ಇಲಾಖೆಯು ಮಧ್ಯಾಹ್ನದ ಬಿಸಿಯೂಟವನ್ನು ರದ್ದು ಮಾಡಿತ್ತು. ಸದ್ಯದ ಮಟ್ಟಿಗೆ ಬಿಸಿಯೂಟದ ಬದಲಿಗೆ ಮಕ್ಕಳಿಗೆ ರೇಷನ್ ಅನ್ನು ಶಾಲೆಗಳಲ್ಲಿ ಪೂರೈಸಲಾಗುತ್ತಿದೆ.
2023ರ ಚುನಾವಣೆಯಲ್ಲಿ ನಮ್ಮ ಶಕ್ತಿ ತೋರಿಸುತ್ತೇವೆ; ಸಿದ್ದರಾಮಯ್ಯ ವಿರುದ್ಧ ಪರೋಕ್ಷ ವಾಗ್ದಾಳಿ ಮುಂದುವರೆಸಿದ HDK
“ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ತಾವು ಮನೆಯಿಂದ ಊಟ ತರುತ್ತಿರುವುದಾಗಿ ಮಕ್ಕಳು ಹೇಳುತ್ತಿದ್ದಾರೆ. ಆದರೆ ನಾವು ಅವರಿಗೆ ಶಾಲೆಯಲ್ಲೇ ಮಧ್ಯಾಹ್ನದ ಊಟ ನೀಡಲು ಆರಂಭಿಸಲಿದ್ದೇವೆ,” ಎಂದು ನಾಗೇಶ್ ಹೇಳಿದ್ದಾರೆ.
ಮಧ್ಯಾಹ್ನದ ಬಿಸಿಯೂಟವನ್ನು ಮರು ಆರಂಭಿಸಲು ಮಕ್ಕಳು, ಪೋಷಕರು, ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿಯಿಂದ ಆಗ್ರಹಗಳು ಬರುತ್ತಿವೆ.
ಕೋವಿಡ್-19 ಲಸಿಕೆಗಳು ಲಭ್ಯವಿರುವ ಕಾರಣ ಬಿಸಿಯೂಟದ ಕಾರ್ಯಕರ್ತರಿಗೆ ಲಸಿಕೆ ನೀಡುವುದು ಕಷ್ಟವೇನಲ್ಲ ಎಂದು ಸರ್ಕಾರೀ ಶಾಲೆಯೊಂದರ ಮುಖ್ಯೋಪಾಧ್ಯಾಯರು ತಿಳಿಸಿದ್ದಾರೆ.