alex Certify ಇಲ್ಲಿದೆ SSLC ಪೂರಕ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ SSLC ಪೂರಕ ಪರೀಕ್ಷೆಯ ಸಂಪೂರ್ಣ ವೇಳಾಪಟ್ಟಿ

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿಯು ಎಸ್​ಎಸ್​ಎಲ್​ಸಿ ಪೂರಕ ಪರೀಕ್ಷೆಗೆ ದಿನಾಂಕ ನಿಗದಿ ಮಾಡಿದೆ.

ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಅಭ್ಯರ್ಥಿಗಳು ಮಂಡಳಿಯ ಅಧಿಕೃತ ವೆಬ್​ಸೈಟ್​ sslc.karnataka.gov.in.ನಲ್ಲಿ ಪರಿಶೀಲಿಸಬಹುದಾಗಿದೆ.

ಪೂರಕ ಪರೀಕ್ಷೆಯು ಸೆಪ್ಟೆಂಬರ್​ 27 ಹಾಗೂ 29ರಂದು ನಡೆಯಲಿದೆ. ಮೊದಲ ದಿನದ ಪರೀಕ್ಷೆಯು 2 ಪಾಳಿಗಳಲ್ಲಿ ನಡೆಯಲಿದೆ.

ಬೆಳಗ್ಗೆ 10:30ರಿಂದ ಮಧ್ಯಾಹ್ನ 1:30 ಮೊದಲ ಪಾಳಿ ಹಾಗೂ ಮಧ್ಯಾಹ್ನ 2:30ರಿಂದ ಸಂಜೆ 5ರವರೆಗೆ ಎರಡನೆ ಪಾಳಿ ನಡೆಯಲಿದೆ. ಒಂದು ದಿನ ಕೋರ್​ ವಿಷಯಗಳ ಪರೀಕ್ಷೆ ಹಾಗೂ ಇನ್ನೊಂದು ದಿನ ಭಾಷಾ ವಿಷಯಗಳಿಗೆ ಪರೀಕ್ಷೆ ಇರಲಿದೆ. ಜೆಟಿಎಸ್​ ಅಭ್ಯರ್ಥಿಗಳಿಗೆ ಸೆಪ್ಟೆಂಬರ್​ 30ರಂದು ಆಯಾ ಶಾಲೆಗಳಲ್ಲಿ ಪರೀಕ್ಷೆ ನಡೆಯಲಿದೆ. ಸೆಪ್ಟೆಂಬರ್​ 28ರಂದು ಯಾವುದೇ ಪರೀಕ್ಷೆ ಇರುವುದಿಲ್ಲ.

ಹಿಂದೂಸ್ತಾನಿ ಸಂಗೀತ/ ಕರ್ನಾಟಕ ಸಂಗೀತ ಮೌಖಿಕ ಪರೀಕ್ಷೆಯು ಸೆಪ್ಟೆಂಬರ್​ 27ರಂದು ಮಧಾಹ್ಯ 2:30ರಿಂದ ಸಂಜೆ4 ಗಂಟೆವರೆಗೆ ನಡೆಯಲಿದೆ. ದಿವ್ಯಾಂಗ ಅಭ್ಯರ್ಥಿಗಳಿಗೆ 15 ನಿಮಿಷ ಹೆಚ್ಚುವರಿ ಸಮಯಾವಕಾಶ ಲಭ್ಯವಾಗಲಿದೆ.

ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಣ ಮಂಡಳಿಯು ಆಗಸ್ಟ್​​ 9ರಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟಿಸಿತ್ತು. ಈ ಬಾರಿ ರಾಜ್ಯದಲ್ಲಿ 99.9 ಪ್ರತಿಶತ ಫಲಿತಾಂಶ ದಾಖಲಾಗಿದೆ. ಈ ವರ್ಷ ಸರಿ ಸುಮಾರು 8 ಲಕ್ಷ ಮಂದಿ 10ನೇ ತರಗತಿ ಪರೀಕ್ಷೆಗೆ ಹಾಜರಾಗಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...