ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ಸೆ. 29 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ಪರೀಕ್ಷೆಯನ್ನು ಮುಂದೂಡಲಾಗಿದೆ.
ಅಕ್ಟೋಬರ್ 1ಕ್ಕೆ ಪರೀಕ್ಷೆ ಮುಂದೂಡಲಾಗಿದೆ. ಸೆ. 29ರಂದು ನಡೆಯಬೇಕಿದ್ದ ಪರೀಕ್ಷೆಯನ್ನು ಅಕ್ಟೋಬರ್ 1ರ ಭಾನುವಾರ ನಡೆಸಲು ತೀರ್ಮಾನಿಸಲಾಗಿದೆ ಎಂದು ಕಾನೂನು ವಿವಿ ಮೌಲ್ಯಮಾಪನ ಕುಲಸಚಿವರು ಮಾಹಿತಿ ನೀಡಿದ್ದಾರೆ. ವಿದ್ಯಾರ್ಥಿಗಳಿಗೆ ಆಗುವ ಅನಾನುಕೂಲತೆ ತಪ್ಪಿಸಲು ಶುಕ್ರವಾರ ನಡೆಯಬೇಕಿದ್ದ ಪರೀಕ್ಷೆಯನ್ನು ಭಾನುವಾರಕ್ಕೆ ಮುಂದೂಡಲಾಗಿದೆ.