![](https://kannadadunia.com/wp-content/uploads/2024/05/thermometer-sun-high-degres-hot-summer-day-high-summer-temperatures-1010691618-2a5ca45876424dffbef441d73ae896b8.jpg)
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಒಣಹವೆ, ತಾಪಮಾನ ಹೆಚ್ಚ ಸ್ಥಿತಿ ಎದುರಾಗುತ್ತಿದೆ. ವಾರಾಂತ್ಯದ ವೇಳೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಸಿಲ ಝಳ ಇನ್ನಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ಈಗಿರುವ ತಾಪಮಾನಕ್ಕಿಂತ ಗರಿಷ್ಠ ತಾಪಮಾನ 3-4 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗಲಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಬಿಸಿಲ ಧಗೆ ಇರಲಿದೆ.