ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳಲ್ಲಿ 13,000 ಚಾಲಕ ಮತ್ತು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
2016ರ ಬಳಿಕ 8 ವರ್ಷಗಳ ನಂತರ ಸಾರಿಗೆ ನಿಗಮಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭವಾಗಿದೆ. ಮೊದಲ ಹಂತದಲ್ಲಿ 6500 ಚಾಲನಾ ಸಿಬ್ಬಂದಿ ಹಾಗು 300 ತಾಂತ್ರಿಕ ಸಿಬ್ಬಂದಿ ನೇಮಕಾತಿಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ 2000 ಚಾಲಕ ಕಂ ಕಂಡಕ್ಟರ್ ಗಳು ಮತ್ತು 300 ತಾಂತ್ರಿಕ ಸಿಬ್ಬಂದಿಗಳನ್ನು ನೇಮಿಸಿಕೊಳ್ಳಲಾಗುತ್ತದೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ 2000 ಚಾಲಕ ಕಮ್ ಕಂಡಕ್ಟರ್ ಗಳನ್ನು ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ 2500 ಕಂಡಕ್ಟರ್ ಗಳನ್ನು ನೇಮಿಸಿಕೊಳ್ಳಲಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಈಗಾಗಲೇ 1619 ಡ್ರೈವಿಂಗ್ ಸಿಬ್ಬಂದಿಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅಂತಿಮ ಆಯ್ಕೆ ಪಟ್ಟಿಯನ್ನು ಜನವರಿ 2024ರ ಕೊನೇ ಯಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕೆಕೆ ಆರ್ ಸಿ 300 ಕಂಡಕ್ಟರ್ ಗಳನ್ನು ನೇಮಿಸಿಕೊಳ್ಳಲು ಅನುಮತಿಯನ್ನು ಪಡೆದುಕೊಂಡಿದೆ.